ಚಂಡೀಗಢ್:ಭಾರತದ ಲೆಜೆಂಡರಿ ಓಟಗಾರ ಮಿಲ್ಖಾ ಸಿಂಗ್ ಅವರಿಗೆ ಕೋವಿಡ್ ಸೋಂಕು ತಗುಲಿದೆ. ಮಿಲ್ಖಾ ಸಿಂಗ್ ಅವರ ಮಗ ಈ ವಿಚಾರವನ್ನು ಖಚಿತಪಡಿಸಿದ್ದು, ಚಂಡೀಗಢ್ನಲ್ಲಿರುವ ತಮ್ಮ ಮನೆಯಲ್ಲಿ ಅವರು ಐಸೊಲೇಟ್ ಆಗಿದ್ದಾರೆ ಎಂದು ತಿಳಿಸಿದ್ದಾರೆ.
ಫ್ಲೈಯಿಂಗ್ ಸಿಖ್ ಎಂದೇ ಜನಪ್ರಿಯವಾಗಿರುವ 91 ವರ್ಷದ ಮಿಲ್ಖಾ ಸಿಂಗ್ ಕಾಮನ್ವೆಲ್ತ್ ಗೇಮ್ಸ್ನ 400 ಮೀಟರ್ ವಿಭಾಗದಲ್ಲಿ ಚಿನ್ನ ಗೆದ್ದಿರುವ ಏಕೈಕ ಆಥ್ಲೀಟ್ ಎನಿಸಿಕೊಂಡಿದ್ದಾರೆ. ಪ್ರಸ್ತುತ ಅವರಿಗೆ ಯಾವುದೇ ಲಕ್ಷಣ ಕಂಡುಬಂದಿಲ್ಲ ಎಂದು ತಿಳಿದುಬಂದಿದೆ.
"ನಾನು ಚೆನ್ನಾಗಿದ್ದೇನೆ ಮತ್ತು ಜ್ವರ ಅಥವಾ ಕೆಮ್ಮು ಸೇರಿದಂತೆ ಯಾವುದೇ ಲಕ್ಷಣಗಳಿಲ್ಲ. ಮೂರ್ನಾಲ್ಕು ದಿನಗಳಲ್ಲಿ ನಾನು ಗುಣಮುಖನಾಗುತ್ತೇನೆ ಎಂದು ವೈದ್ಯರು ಹೇಳಿದ್ದಾರೆ" ಎಂದು ಮಿಲ್ಖಾ ಸಿಂಗ್ ತಿಳಿಸಿದ್ದಾರೆ.