ನವದೆಹಲಿ:ಕೇಂದ್ರ ಯುವ ವ್ಯವಹಾರಗಳು ಮತ್ತು ಕ್ರೀಡಾ ಸಚಿವಾಲಯವು 2023ರ ರಾಷ್ಟ್ರೀಯ ಕ್ರೀಡಾ ಪ್ರಶಸ್ತಿಗಳನ್ನು ಬುಧವಾರ ಪ್ರಕಟಿಸಿದೆ. 2024ರ ಜನವರಿ 9ರಂದು (ಮಂಗಳವಾರ) 11 ಗಂಟೆಗೆ ರಾಷ್ಟ್ರಪತಿ ಭವನದಲ್ಲಿ ಆಯೋಜಿಸಲಾಗುವ ವಿಶೇಷ ಸಮಾರಂಭದಲ್ಲಿ ಭಾರತದ ರಾಷ್ಟ್ರಪತಿಗಳಿಂದ ಪ್ರಶಸ್ತಿಗಳನ್ನು ಕ್ರೀಡಾಪಟುಗಳು ಸ್ವೀಕರಿಸಲಿದ್ದಾರೆ.
ಪ್ರಶಸ್ತಿಗಳು ಈ ಕೆಳಗಿನಂತಿವೆ:
ಮೇಜರ್ ಧ್ಯಾನ್ ಚಂದ್ ಖೇಲ್ ರತ್ನ ಪ್ರಶಸ್ತಿ: ಸಾತ್ವಿಕ್ ಸಾಯಿರಾಜ್ ರಾಂಕಿರೆಡ್ಡಿ ಮತ್ತು ಚಿರಾಗ್ ಶೆಟ್ಟಿ (ಬ್ಯಾಡ್ಮಿಂಟನ್)
ಅರ್ಜುನ ಪ್ರಶಸ್ತಿ: ಮೊಹಮ್ಮದ್ ಶಮಿ (ಕ್ರಿಕೆಟ್), ಅಜಯ್ ರೆಡ್ಡಿ (ಅಂಧ ಕ್ರಿಕೆಟ್), ಓಜಸ್ ಪ್ರವೀಣ್ ಡಿಯೋಟಾಲೆ, ಅದಿತಿ ಗೋಪಿಚಂದ್ ಸ್ವಾಮಿ (ಆರ್ಚರಿ), ಶೀತಲ್ ದೇವಿ (ಪ್ಯಾರಾ ಆರ್ಚರಿ), ಪಾರುಲ್ ಚೌಧರಿ ಮತ್ತು ಮುರಳಿ ಶ್ರೀಶಂಕರ್ (ಅಥ್ಲೆಟಿಕ್ಸ್), ಮೊಹಮ್ಮದ್ ಹುಸಾಮುದ್ದೀನ್ (ಬಾಕ್ಸಿಂಗ್), ಆರ್ ವೈಶಾಲಿ (ಚೆಸ್), ದಿವ್ಯಾಕೃತಿ ಸಿಂಗ್ ಮತ್ತು ಅನುಷ್ ಅಗರ್ವಾಲಾ (ಈಕ್ವೆಸ್ಟ್ರಿಯನ್), ದೀಕ್ಷಾ ದಾಗರ್ (ಗಾಲ್ಫ್), ಕ್ರಿಶನ್ ಬಹದ್ದೂರ್ ಪಾಠಕ್ ಮತ್ತು ಸುಶೀಲಾ ಚಾನು (ಹಾಕಿ), ಪಿಂಕಿ (ಲಾನ್ ಬಾಲ್), ಐಶ್ವರಿ ಪ್ರತಾಪ್ ಸಿಂಗ್ ತೋಮರ್, ಇಶಾ ಸಿಂಗ್ (ಶೂಟಿಂಗ್), ಆಂಟಿಮ್ ಪಂಗಲ್, ಸುನಿಲ್ ಕುಮಾರ್ (ಕುಸ್ತಿ), ಐಹಿಕಾ ಮುಖರ್ಜಿ (ಟೇಬಲ್ ಟೆನಿಸ್), ಹರಿಂದರ್ ಪಾಲ್ ಸಿಂಗ್ ಸಂಧು (ಸ್ಕ್ವಾಷ್), ನವೋರೆಮ್ ರೋಶಿಬಿನಾ ದೇವಿ (ವುಶು), ಪ್ರಾಚಿ ಯಾದವ್ (ಪ್ಯಾರಾ ಕ್ಯಾನೋಯಿಂಗ್), ಪವನ್ ಕುಮಾರ್, ರಿತು ನೇಗಿ (ಕಬಡ್ಡಿ), ನಸ್ರೀನ್ (ಖೋ ಖೋ).