ಜ್ಯೂರಿಚ್:ಟೋಕಿಯೋ ಒಲಿಂಪಿಕ್ ಚಿನ್ನದ ಪದಕ ವಿಜೇತ ಭಾರತದ ಜಾವೆಲಿನ್ ಕ್ರೀಡೆಯ ದಿಗ್ಗಜ ನೀರಜ್ ಚೋಪ್ರಾ ಗುರುವಾರ ಮತ್ತೊಂದು ಐತಿಹಾಸಿಕ ಸಾಧನೆ ಮಾಡಿದ್ದಾರೆ. ಇಲ್ಲಿ ನಡೆದ ಪ್ರತಿಷ್ಠಿತ ಡೈಮಂಡ್ ಲೀಗ್ ಫೈನಲ್ಸ್‌ನಲ್ಲಿ ಭಾಗಿಯಾಗಿ ಪ್ರಶಸ್ತಿ ಗೆದ್ದಿರುವ ಮೊದಲ ಭಾರತೀಯ ಎನಿಸಿಕೊಂಡರು.
ಚೋಪ್ರಾ ಅವರು ಫೌಲ್‌ನೊಂದಿಗೆ ಆಟ ಪ್ರಾರಂಭಿಸಿದ್ದರು. ಆದರೆ ತಮ್ಮ ಎರಡನೇ ಪ್ರಯತ್ನದಲ್ಲಿ 88.44 ಮೀ ದೂರ ಜಾವೆಲಿನ್ ಎಸೆದು ಅಗ್ರಸ್ಥಾನಕ್ಕೆ ಜಿಗಿದರು. ಇದು ಅವರ ವೃತ್ತಿಜೀವನದ ಅತ್ಯಂತ ದೊಡ್ಡ ಗೆಲುವುಗಳಲ್ಲಿ ಒಂದು. ತಮ್ಮ ಮುಂದಿನ ನಾಲ್ಕು ಎಸೆತಗಳಲ್ಲಿ 88.00ಮೀ, 86.11ಮೀ, 87.00ಮೀ ಮತ್ತು 83.60ಮೀ ಎಸೆದು ಚಾಂಪಿಯನ್ ಆಗಿ ಹೊರ ಹೊಮ್ಮಿದರು.