ಇಸ್ತಾಂಬುಲ್(ಟರ್ಕಿ):ವಿಶ್ವ ಬಾಕ್ಸಿಂಗ್ ಚಾಂಪಿಯನ್ಶಿಪ್ನಲ್ಲಿ ಅತ್ಯದ್ಭುತ ಪ್ರದರ್ಶನ ನೀಡಿರುವ 25 ವರ್ಷದ ನಿಖತ್ ಜರೀನ್ ಭಾರತಕ್ಕೆ ಚಿನ್ನದ ಪದಕ ಗೆದಿದ್ದಾರೆ. ಟರ್ಕಿಯ ಇಸ್ತಾಂಬುಲ್ನಲ್ಲಿ ಇಂದು ನಡೆದ ಫೈನಲ್ ಪಂದ್ಯದಲ್ಲಿ ಎದುರಾಳಿ ವಿರುದ್ಧ ಭರ್ಜರಿ ಜಯ ಸಾಧಿಸಿ, ಹೊಸದೊಂದು ಇತಿಹಾಸ ಸೃಷ್ಟಿ ಮಾಡಿದ್ದಾರೆ. ಫೈನಲ್ ಪಂದ್ಯದಲ್ಲಿ ಥಾಯ್ಲೆಂಡ್ ಎದುರಾಳಿ ವಿರುದ್ಧ ಭರ್ಜರಿ 5-0 ಅಂತರದಿಂದ ಗೆಲುವಿನ ನಗೆ ಬೀರಿದ್ದು, ಹೊಸದೊಂದು ದಾಖಲೆ ನಿರ್ಮಾಣ ಮಾಡಿದ್ದು, ವಿಶ್ವ ಬಾಕ್ಸಿಂಗ್ ಚಾಂಪಿಯನ್ಶಿಪ್ನಲ್ಲಿ ಚಿನ್ನದ ಪದಕ ಗೆದ್ದ ಮೇರಿ ಕೋಮ್, ಸರಿತಾ ದೇವಿ ಸಾಲಿಗೆ ಸೇರ್ಪಡೆಯಾಗಿದ್ದಾರೆ.
ಬುಧವಾರ ನಡೆದ ಸೆಮಿಫೈನಲ್ ನಲ್ಲಿ ಬ್ರೆಜಿಲ್‌ನ ಕ್ಯಾರೊಲಿನ್ ಡಿ ಅಲ್ಮೇಡಾ ಅವರನ್ನು 5-0 ಅಂತರದಿಂದ ಸೋಲಿಸುವ ಮೂಲಕ ಫೈನಲ್‌ಗೆ ಪ್ರವೇಶ ಪಡೆದುಕೊಂಡಿದ್ದ ತೆಲಂಗಾಣ ಬಾಕ್ಸರ್ ಇದೀಗ ಚಿನ್ನ ಗೆದ್ದಿದ್ದಾರೆ. ಈ ಹಿಂದೆ ಏಷ್ಯನ್ ಚಾಂಪಿಯನ್ಶಿಪ್ನಲ್ಲಿ ಕಂಚಿನ ಪದಕ ಗೆದ್ದಿರುವ ತೆಲಂಗಾಣದ ಬಾಕ್ಸರ್ ಜರೀನ್, ಇದೀಗ ಭಾರತಕ್ಕೆ ಮಹಿಳಾ ವಿಭಾಗದ ಬಾಕ್ಸಿಂಗ್ನಲ್ಲಿ ಚಿನ್ನದ ಪದಕದ ಭರವಸೆ ಮೂಡಿಸಿದ್ದಾರೆ. ಅದರಂತೆ ಇಂದು ನಡೆದ ಫೈನಲ್ ಪಂದ್ಯದಲ್ಲಿ ಗೆಲುವು ದಾಖಲಿಸಿ, ಚಿನ್ನದ ಪದಕಕ್ಕೆ ಮುತ್ತಿಕ್ಕಿದ್ದಾರೆ.