ನವದೆಹಲಿ:ಭಾರತೀಯ ಒಲಂಪಿಕ್ ಸಂಸ್ಥೆಯ ಅಧ್ಯಕ್ಷರಾಗಿ ಮಾಜಿ ಓಟಗಾರ್ತಿ, ಏಷ್ಯನ್ ಗೇಮ್ಸ್ ಚಿನ್ನದ ಪದಕ ವಿಜೇತೆ ಪಿಟಿ ಉಷಾ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಇಂದು ನಾಮಪತ್ರ ಸಲ್ಲಿಸಲು ಕೊನೆಯ ದಿನವಾಗಿದ್ದು ಉಷಾ ಅವರನ್ನು ಹೊರತುಪಡಿಸಿ ಯಾರೊಬ್ಬರೂ ಉಮೇದುವಾರಿಕೆ ಸಲ್ಲಿಸದ ಕಾರಣ ಅವಿರೋಧ ಆಯ್ಕೆ ನಡೆದಿದೆ.
ಭಾರತೀಯ ಒಲಂಪಿಕ್ ಸಂಸ್ಥೆ ಅಧ್ಯಕ್ಷರಾಗಿ ಪಿಟಿ ಉಷಾ ಅವಿರೋಧ ಆಯ್ಕೆ - Indian Olympic Association chief
ಭಾರತೀಯ ಒಲಂಪಿಕ್ ಸಂಸ್ಥೆಯ ಅಧ್ಯಕ್ಷರಾಗಿ ಮಾಜಿ ಓಟಗಾರ್ತಿ, ಏಷ್ಯನ್ ಗೇಮ್ಸ್ ಚಿನ್ನದ ಪದಕ ವಿಜೇತೆ ಪಿಟಿ ಉಷಾ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಉಷಾ ಅವರು ಭಾನುವಾರ 14 ಬೆಂಬಲಿಗರೊಂದಿಗೆ ಅಧ್ಯಕ್ಷ ಸ್ಥಾನದ ಆಕಾಂಕ್ಷಿಯಾಗಿ ನಾಮಪತ್ರ ಸಲ್ಲಿಸಿದರು.
ಪಿಟಿ ಉಷಾ ಅವಿರೋಧ ಆಯ್ಕೆ
ಒಲಂಪಿಕ್ ಸಂಸ್ಥೆಗೆ ಆಯ್ಕೆಯಾದ ಮೊದಲ ಮಹಿಳೆ ಎಂಬ ಖ್ಯಾತಿಗೆ ಪಿಟಿ ಉಷಾ ಅವರು ಪಾತ್ರರಾದರು. ಇನ್ನುಳಿದಂತೆ ಉಪಾಧ್ಯಕ್ಷ(ಮಹಿಳೆ), ಜಂಟಿ ಕಾರ್ಯದರ್ಶಿ(ಮಹಿಳೆ) ನಾಲ್ಕು ಕಾರ್ಯಕಾರಿ ಮಂಡಳಿ ಸದಸ್ಯ ಸ್ಥಾನಕ್ಕೆ 12 ಅಭ್ಯರ್ಥಿಗಳು ಉಮೇದುವಾರಿಕೆ ಸಲ್ಲಿಸಿದ್ದು, ಡಿಸೆಂಬರ್ 10 ರಂದು ಚುನಾವಣೆ ನಡೆಯಲಿದೆ. ಉಷಾ ಅವರು ಭಾನುವಾರ 14 ಬೆಂಬಲಿಗರೊಂದಿಗೆ ಅಧ್ಯಕ್ಷ ಸ್ಥಾನದ ಆಕಾಂಕ್ಷಿಯಾಗಿ ನಾಮಪತ್ರ ಸಲ್ಲಿಸಿದ್ದರು.
ಓದಿ:ಒಲಿಂಪಿಕ್ ಸಂಸ್ಥೆ ಅಧ್ಯಕ್ಷ ಸ್ಥಾನ ಚುನಾವಣೆ ರೇಸ್ಗಿಳಿದ ಪಿಟಿ ಉಷಾ