ಮುಂಬೈ: 21 ಬಾರಿಯ ಗ್ರ್ಯಾಂಡ್‌ಸ್ಲಾಮ್ ವಿಜೇತ ನೊವಾಕ್ ಜೊಕೊವಿಕ್ ಭಾನುವಾರ ಏಳನೇ ವಿಂಬಲ್ಡನ್ ಪ್ರಶಸ್ತಿ ಗೆದ್ದರು. ಸರ್ಬಿಯಾದ ಚಾಂಪಿಯನ್ ಆಟಗಾರನನ್ನು ಹೊಗಳಿದ ವಿಶ್ವ ಕ್ರಿಕೆಟ್ ದಂತಕಥೆ ಸಚಿನ್ ತೆಂಡೂಲ್ಕರ್, ಸತತವಾಗಿ ವಿಂಬಲ್ಡನ್ ಪ್ರಶಸ್ತಿ ಗೆಲ್ಲುವುದು ಸಾಮಾನ್ಯ ಸಂಗತಿಯಲ್ಲ ಎಂದು ತಿಳಿಸಿದ್ದಾರೆ.
ಭಾನುವಾರ ನಡೆದ ಪುರುಷರ ಸಿಂಗಲ್ಸ್ ಫೈನಲ್‌ನಲ್ಲಿ ನೊವಾಕ್ ಜೊಕೊವಿಕ್ ಆಸ್ಟ್ರೇಲಿಯಾದ ನಿಕ್ ಕಿರ್ಗಿಯೋಸ್ ಅವರನ್ನು ಸೋಲಿಸುವ ಮೂಲಕ ರೋಜರ್ ಫೆಡರರ್ ಅವರ ದಾಖಲೆಯ 20 ಗ್ರ್ಯಾಂಡ್‌ಸ್ಲಾಮ್ ಪ್ರಶಸ್ತಿ ಪಟ್ಟಿಯನ್ನು ಹಿಂದಿಕ್ಕಿ 21ನೇ ಗ್ರ್ಯಾಂಡ್‌ಸ್ಲಾಮ್ ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡರು.