ಬರ್ಮಿಂಗ್‌ಹ್ಯಾಮ್(ಇಂಗ್ಲೆಂಡ್): ಬರ್ಮಿಂಗ್ಹ್ಯಾಮ್ನಲ್ಲಿ ನಡೆಯುತ್ತಿರುವ ಕಾಮನ್‌ವೆಲ್ತ್ ಗೇಮ್ಸ್ನಲ್ಲಿ ಮಹಿಳೆಯರ ಜಾವೆಲಿನ್ ಎಸೆತದಲ್ಲಿ ಭಾರತ ಇತಿಹಾಸ ನಿರ್ಮಿಸಿದೆ. ಅನು ರಾಣಿ ಕಂಚಿನ ಪದಕಕ್ಕೆ ಮುತ್ತಿಕ್ಕಿ ಐತಿಹಾಸಿಕ ಗೆಲುವು ಸಾಧಿಸಿದ್ದಾರೆ.
ಮಹಿಳೆಯರ ಜಾವೆಲಿನ್ ಎಸೆತದಲ್ಲಿ ಅನು ರಾಣಿ 60 ಮೀಟರ್ ದೂರ ಎಸೆಯುವ ಮೂಲಕ ಕಂಚಿನ ಪದಕಕ್ಕೆ ಕೊರಳೊಡ್ಡಿದ್ದಾರೆ. ಈ ಮೂಲಕ ಕಾಮನ್‌ವೆಲ್ತ್ ಗೇಮ್ಸ್ನಲ್ಲಿ ಭಾರತಕ್ಕೆ ಮೊದಲ ಪದಕ ತಂದುಕೊಟ್ಟು ಕೀರ್ತಿಗೆ ಅನು ಪಾತ್ರರಾಗಿದ್ದಾರೆ.