ಭಾರತದ ಟೆನಿಸ್ ಆಟಗಾರ್ತಿ ಸಾನಿಯಾ ಮಿರ್ಜಾ ದಾಂಪತ್ಯ ಜೀವನದಲ್ಲಿ ಬಿರುಕು ಮೂಡಿರುವ ಬಗ್ಗೆ ಸಾಕಷ್ಟು ಸುದ್ದಿಗಳು ಹರಿದಾಡುತ್ತಿವೆ. ಸಾನಿಯಾ ಮಿರ್ಜಾ ಮತ್ತು ಶೋಯೆಬ್ ಮಲಿಕ್ ವೈವಾಹಿಕ ಜೀವನದಲ್ಲಿ ಎಲ್ಲವೂ ಸರಿಯಿಲ್ಲ ಎಂದು ಪಾಕಿಸ್ತಾನಿ ಮಾಧ್ಯಮಗಳಲ್ಲಿ ವರದಿಯಾಗಿದೆ.
ಸಾನಿಯಾ ಮತ್ತು ಶೋಯೆಬ್ 2010ರ ಏಪ್ರಿಲ್ನಲ್ಲಿ ವಿವಾಹವಾಗಿದ್ದರು. ಶೋಯೆಬ್ ಪಾಕಿಸ್ತಾನ ಮೂಲದವರಾಗಿದ್ದರಿಂದ ಆ ಸಮಯದಲ್ಲಿ ಈ ಇಬ್ಬರ ಮದುವೆಗೆ ಭಾರಿ ವಿರೋಧ ಕೂಡ ವ್ಯಕ್ತವಾಗಿತ್ತು. ಆ ನಂತರ ಅಂತಹ ದೊಡ್ಡ ಸುದ್ದಿ ಏನೂ ಆಗಲಿಲ್ಲ. ಆದ್ರೆ ಕೆಲ ದಿನಗಳ ಹಿಂದೆ ಸಾನಿಯಾ ತಮ್ಮ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಮಾಡಿದ್ದ ಪೋಸ್ಟ್ನಿಂದ ಇದೀಗ ಬೇರ್ಪಡೆ ವದಂತಿ ಜೋರಾಗಿದೆ.