ಭಾರತದ ಟೆನ್ನಿಸ್ ತಾರೆ ಸಾನಿಯಾ ಮಿರ್ಜಾ ಮತ್ತು ಪಾಕಿಸ್ತಾನದ ಮಾಜಿ ಕ್ರಿಕೆಟಿಗ ಶೋಯೆಬ್ ಮಲಿಕ್ ಅವರ ದಾಂಪತ್ಯ ಜೀವನದಲ್ಲಿ ಬಿರುಕು ಮೂಡಿದೆ ಎನ್ನುವ ಸುದ್ದಿ ಭಾರಿ ಚರ್ಚೆಗೆ ವೇದಿಕೆ ಸೃಷ್ಟಿಸಿರೋದಂತೂ ಸುಳ್ಳಲ್ಲ. ಇನ್ನೇನು ಈ ಜೋಡಿ ಸಂಪೂರ್ಣ ದೂರವಾಗಲಿದ್ದಾರೆ ಎನ್ನುವ ಮಾತು ದಟ್ಟವಾಗುವಷ್ಟರಲ್ಲಿ, ಶೀಘ್ರದಲ್ಲೇ ಕಾರ್ಯಕ್ರಮವೊಂದನ್ನು ನಡೆಸಿಕೊಡಲಿದ್ದೇವೆ ಎಂದು ತಿಳಿಸಿ ನೆಟ್ಟಿಗರ ಹುಬ್ಬೇರುವಂತೆ ಮಾಡಿದ್ದರು. ಇದೀಗ ಶೋಯೆಬ್ ಮಲಿಕ್ ಅವರ ಹೊಸ ಪೋಸ್ಟ್ ಜನರಲ್ಲಿ ಗೊಂದಲ ಸೃಷ್ಟಿಸಿದೆ.
ಸಾನಿಯಾ ಮಿರ್ಜಾ ಇಂದು 36ನೇ ಹುಟ್ಟುಹಬ್ಬದ ಸಂಭ್ರಮದಲ್ಲಿದ್ದಾರೆ. ಪತಿ ಶೋಯೆಬ್ ಮಲಿಕ್ ಪತ್ನಿ ಸಾನಿಯಾ ಮಿರ್ಜಾ ಅವರಿಗೆ ವಿಶೇಷವಾಗಿ ಶುಭ ಕೋರಿದ್ದಾರೆ. ಹುಟ್ಟುಹಬ್ಬದ ಶುಭಾಶಯಗಳು ಸಾನಿಯಾ ಮಿರ್ಜಾ, ಸದಾ ನಿಮಗೆ ಆರೋಗ್ಯ ಮತ್ತು ಖುಷಿಯ ಜೀವನವಿರಲಿ ಎಂದು ಆಶಿಸುತ್ತೇನೆ ಎಂದು ಸೋಷಿಯಲ್ ಮೀಡಿಯಾ ಮೂಲಕ ಶುಭ ಕೋರಿದ್ದಾರೆ.
ಅವರ ಈ ಪೋಸ್ಟ್ ಇದೀಗ ನೆಟ್ಟಿಗರ ಗಮನ ಸೆಳೆದಿದೆ. ಡಿವೋರ್ಸ್ ಗಾಸಿಪ್ ನಡುವೆ ಶೋಯೆಬ್ ಮಲಿಕ್ ಪೋಸ್ಟ್ ನೆಟ್ಟಿಗರಲ್ಲಿ ಗೊಂದಲ ಸೃಷ್ಟಿಸಿದೆ. ಈ ಜೋಡಿ ಬೇರೆಯಾಗಲಿದ್ದಾರಾ? ಅಥವಾ ದಾಂಪತ್ಯ ಜೀವನ ಮುಂದುವರಿಸಲಿದ್ದಾರಾ? ಅನ್ನೋ ಚರ್ಚೆ ಜೋರಾಗಿದೆ.