ಅಬುಧಾಬಿ :ಭಾರತದ ಪ್ರಸಿದ್ಧ ಈಜುಗಾರ ಕನ್ನಡಿಗ ಶ್ರೀಹರಿ ನಟರಾಜ್ 50 ಮೀಟರ್ ಬ್ಯಾಕ್ಸ್ಟ್ರೋಕ್ ವಿಭಾಗದಲ್ಲಿ ರಾಷ್ಟ್ರೀಯ ದಾಖಲೆ ಮಾಡಿದ್ದಾರೆ. ಆದರೆ, FINA ಶಾರ್ಟ್ ಕೋರ್ಸ್ ವಿಶ್ವ ಚಾಂಪಿಯನ್ಶಿಪ್ನಲ್ಲಿ ಸೆಮಿಫೈನಲ್ಸ್ ಪ್ರವೇಶಿಸುವಲ್ಲಿ ವಿಫಲರಾಗಿದ್ದಾರೆ.
20 ವರ್ಷದ ಬೆಂಗಳೂರಿನ ನಟರಾಜ್, ಪುರುಷರ 50 ಮೀಟರ್ ಬ್ಯಾಕ್ಸ್ಟ್ರೋಕ್ಲ್ಲಿ 24.40 ಸೆಕೆಂಡ್ಗಳಲ್ಲಿ ಗುರಿ ತಲುಪಿ ತಮ್ಮದೇ ದಾಖಲೆಯನ್ನು ಉತ್ತಮಪಡಿಸಿಕೊಂಡರು. ಆದರೆ, 26ನೇ ಸ್ಥಾನ ಪಡೆಯುವ ಮೂಲಕ ಸೆಮಿಫೈನಲ್ಸ್ ಪ್ರವೇಶಿಸುವಲ್ಲಿ ವಿಫಲರಾದರು.