2022ರ ಬರ್ಮಿಂಗ್ಹ್ಯಾಮ್ ಕಾಮನ್ವೆಲ್ತ್ ಗೇಮ್ಸ್ನಲ್ಲಿ ಭಾರತಕ್ಕೆ ಮೊದಲ ಚಿನ್ನದ ಪದಕ ಗೆದ್ದುಕೊಟ್ಟಿರುವ ವೇಟ್ ಲಿಫ್ಟರ್ ಮೀರಾಬಾಯಿ ಚಾನು ಅವರಿಗಿಂದು ಹುಟ್ಟುಹಬ್ಬದ ಸಂಭ್ರಮ. 28ನೇ ವಸಂತಕ್ಕೆ ಕಾಲಿಟ್ಟಿರುವ ಚಾನು ಸಿಕ್ಕಿಂನಲ್ಲಿರುವ ತಮ್ಮ ನಿವಾಸದಲ್ಲಿ ಕೇಕ್ ಕತ್ತರಿಸಿ ಖುಷಿಪಟ್ಟರು.
ಕುಟುಂಬ ವರ್ಗ ಹಾಗೂ ಸ್ನೇಹಿತರೊಂದಿಗೆ ಬೃಹತ್ ಕೇಕ್ ಕತ್ತರಿಸಿ ಹುಟ್ಟಿದ ದಿನಾಚರಿಸಿದ ಅವರು ಖುಷಿ ಕ್ಷಣಗಳ ಕೆಲವು ಫೋಟೋಗಳನ್ನು ತಮ್ಮ ಟ್ವಿಟರ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ಈ ಸುಸಂದರ್ಭದಲ್ಲಿ ಚಾನು, ಸಸಿಗಳನ್ನು ನೆಟ್ಟು ಪರಿಸರ ಪ್ರೇಮವನ್ನೂ ಮೆರೆದರು.