ನವದೆಹಲಿ:ಚೀನಾದ ಹ್ಯಾಂಗ್‌ಝೌನಲ್ಲಿ ನಡೆಯುವ19ನೇ ಏಷ್ಯನ್ ಗೇಮ್ಸ್‌ಗೆ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಪುರುಷ ಮತ್ತು ಮಹಿಳೆಯರ ತಂಡವನ್ನು ಪ್ರಕಟಿಸಿದೆ. ಚೀನಾದ ಹ್ಯಾಂಗ್‌ಝೌನಲ್ಲಿ ಸೆಪ್ಟೆಂಬರ್ ಮತ್ತು ಅಕ್ಟೋಬರ್ ತಿಂಗಳಲ್ಲಿ ಏಷ್ಯನ್ ಗೇಮ್ಸ್ ನಡೆಯಲಿವೆ.
ಈ ಬಾರಿ ಏಷ್ಯನ್ ಗೇಮ್ಸ್ನಲ್ಲಿ ಕ್ರಿಕೆಟ್ ತಂಡಗಳು ಭಾಗವಹಿಸಲು ಬಿಸಿಸಿಐ ಅಪೆಕ್ಸ್ ಕೌನ್ಸಿಲ್ ಸಭೆಯು ಇದೇ 7ರಂದು ಅನುಮತಿ ನೀಡಿತ್ತು. ಶುಕ್ರವಾರ ಪುರುಷ ಮತ್ತು ಮಹಿಳೆಯರ ಎರಡೂ ತಂಡವನ್ನು ಬಿಸಿಸಿಐ ಘೋಷಿಸಿದೆ. ಪುರುಷರ ತಂಡವನ್ನು ರುತುರಾಜ್ ಗಾಯಕ್ವಾಡ್ ಹಾಗೂ ಮಹಿಳಾ ತಂಡವನ್ನು ಹರ್ಮನ್‌ಪ್ರೀತ್ ಕೌರ್ ಮುನ್ನಡೆಸಲಿದ್ದಾರೆ.
ಟೀಂ ಇಂಡಿಯಾ (ಸೀನಿಯರ್ ಮೆನ್) ತಂಡ: ರುತುರಾಜ್ ಗಾಯಕ್ವಾಡ್ (ನಾಯಕ), ಯಶಸ್ವಿ ಜೈಸ್ವಾಲ್, ರಾಹುಲ್ ತ್ರಿಪಾಠಿ, ತಿಲಕ್ ವರ್ಮಾ, ರಿಂಕು ಸಿಂಗ್, ಜಿತೇಶ್ ಶರ್ಮಾ (ವಿಕೆಟ್ ಕೀಪರ್), ವಾಷಿಂಗ್ಟನ್ ಸುಂದರ್, ಶಹಬಾಜ್ ಅಹ್ಮದ್, ರವಿ ಬಿಷ್ಣೋಯ್, ಅವೇಶ್ ಖಾನ್, ಅರ್ಷದೀಪ್ ಸಿಂಗ್, ಮುಖೇಶ್ ಕುಮಾರ್, ಶಿವಂ ಮಾವಿ, ಶಿವಂ ದುಬೆ, ಪ್ರಭಾಸಿಮ್ರಾನ್ ಸಿಂಗ್ (ವಿಕೆಟ್ ಕೀಪರ್) ಪುರುಷರ ತಂಡದಲ್ಲಿ ಸ್ಥಾನ ಪಡೆದಿದ್ದಾರೆ.
ಸ್ಟ್ಯಾಂಡ್‌ಬೈ ಪಟ್ಟಿಯಲ್ಲಿ ಯಶ್ ಠಾಕೂರ್, ಸಾಯಿ ಕಿಶೋರ್, ವೆಂಕಟೇಶ್ ಅಯ್ಯರ್, ದೀಪಕ್ ಹೂಡಾ, ಸಾಯಿ ಸುದರ್ಶನ್ ಇದ್ದಾರೆ. ಟಿ20 ಮಾದರಿಯಲ್ಲಿ ಪುರುಷರ ಕ್ರಿಕೆಟ್ ಸೆಪ್ಟೆಂಬರ್ 28ರಿಂದ ಅಕ್ಟೋಬರ್ 8 ರವರೆಗೆ ನಡೆಯಲಿದೆ. ಸದ್ಯ ವೆಸ್ಟ್ ಇಂಡೀಸ್ ವಿರುದ್ಧದ ಟೆಸ್ಟ್ ಪಂದ್ಯಕ್ಕೆ ಯುವ ಕ್ರಿಕೆಟರ್ ಯಶಸ್ವಿ ಜೈಸ್ವಾಲ್ ಪಾದಾರ್ಪಾಣೆ ಮಾಡಿದ್ದು, ಮೊದಲನೇ ಪಂದ್ಯದಲ್ಲೇ 150 ರನ್ ಗಳಿಸಿದ್ದಾರೆ. ಈ ಮೂಲಕ ಪಾದಾರ್ಪಣೆ ಪಂದ್ಯದಲ್ಲೇ 150 ರನ್ ಗಳಿಸಿದ ಭಾರತದ ಮೂರನೇ ಬ್ಯಾಟ್ಸಮನ್ ಎಂಬ ಹೆಗ್ಗಳಿಕೆಗೆ ಜೈಸ್ವಾಲ್ ಪಾತ್ರರಾದರು. ಸದ್ಯ ಉತ್ತಮ ಫಾರ್ಮ್ನಲ್ಲಿರುವ ಯುವ ಕ್ರಿಕೆಟರ್ಗೆ ಏಷ್ಯನ್ ಗೇಮ್ಸ್ ಟೀಂನಲ್ಲೂ ಅವಕಾಶ ನೀಡಲಾಗಿದೆ.
ಟೀಂ ಇಂಡಿಯಾ (ಸೀನಿಯರ್ ವುಮೆನ್ಸ್) ತಂಡ:ಹರ್ಮನ್‌ಪ್ರೀತ್ ಕೌರ್ (ನಾಯಕಿ), ಸ್ಮೃತಿ ಮಂಧಾನ (ಉಪ ನಾಯಕಿ), ಶಫಾಲಿ ವರ್ಮಾ, ಜೆಮಿಮಾ ರಾಡ್ರಿಗಸ್, ದೀಪ್ತಿ ಶರ್ಮಾ, ರಿಚಾ ಘೋಷ್ (ವಿಕೆಟ್ ಕೀಪರ್), ಅಮನ್ಜೋತ್ ಕೌರ್, ದೇವಿಕಾ ವೈದ್ಯ, ಅಂಜಲಿ ಸರ್ವಾಣಿ, ಟೈಟಾಸ್ ಸಾಧು, ರಾಜೇಶ್ವರಿ ಗಾಯಕ್ವಾಡ್, ಮಿನ್ನು ಮಣಿ, ಕನಿಕಾ ಅಹುಜಾ, ಉಮಾ ಚೆಟ್ರಿ (ವಿಕೆಟ್ ಕೀಪರ್), ಅನುಷಾ ಬಾರೆಡ್ಡಿ ಮಹಿಳೆಯರ ತಂಡದಲ್ಲಿ ಸ್ಥಾನ ಪಡೆದಿದ್ದಾರೆ.
ಸ್ಟ್ಯಾಂಡ್‌ಬೈ ಪಟ್ಟಿಯಲ್ಲಿ ಹರ್ಲೀನ್ ಡಿಯೋಲ್, ಕಾಶ್ವೀ ಗೌತಮ್, ಸ್ನೇಹ್ ರಾಣಾ, ಸೈಕಾ ಇಶಾಕ್, ಪೂಜಾ ವಸ್ತ್ರಾಕರ್ ಇದ್ದು, ಮಹಿಳಾ ಕ್ರಿಕೆಟ್ ಸ್ಪರ್ಧೆಯು ಸೆಪ್ಟೆಂಬರ್ 19 ರಿಂದ 28ರ ವರೆಗೆ ಟಿ20 ಸ್ವರೂಪದಲ್ಲಿ ನಡೆಯಲಿದೆ.