ವಾಷಿಂಗ್ಟನ್:23 ಸಲ ಗ್ರ್ಯಾಂಡ್ ಸ್ಲಾಮ್ ಚಾಂಪಿಯನ್ ಆಗಿರುವ ಸೆರೆನಾ ವಿಲಿಯಮ್ಸ್ ಟೆನಿಸ್ನಿಂದ ನಿವೃತ್ತಿ ಘೋಷಿಸುವ ಸುಳಿವು ನೀಡಿದ್ದಾರೆ. ಇದಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣದಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ. ಈ ವರ್ಷದ ಅಂತಿಮ ಗ್ರ್ಯಾಂಡ್ ಸ್ಲಾಮ್ ಪಂದ್ಯಾವಳಿ ಬಳಿಕ ಟೆನಿಸ್ ತ್ಯಜಿಸಲು ಯೋಚಿಸುತ್ತಿರುವುದಾಗಿ ಅವರು ಇನ್ಸ್ಟಾಗ್ರಾಮ್ನಲ್ಲಿ ಬರೆದುಕೊಂಡಿದ್ದಾರೆ.
2021ರ ಫ್ರೆಂಚ್ ಓಪನ್ ನಂತರ ಟೆನಿಸ್ ಅಖಾಡಕ್ಕಿಳಿದಿದ್ದ ಸೆರೆನಾ ತಮ್ಮ ಹಳೆಯ ಶೈಲಿಯ ಆಟ ಆಡುತ್ತಿಲ್ಲ. ಹೀಗಾಗಿ, ಈ ಮಹತ್ವದ ನಿರ್ಧಾರ ಕೈಗೊಳ್ಳಲು ಮುಂದಾಗಿದ್ದಾರೆ. "ನಾನು ಮುಂದಿನ ಹೆಜ್ಜೆ ಬಗ್ಗೆ ಯೋಚನೆ ಮಾಡುತ್ತಿದ್ದೇನೆ. ಜೀವನದಲ್ಲಿ ಬೇರೆ ದಿಕ್ಕಿನಲ್ಲಿ ಚಲಿಸುವ ಸಮಯ ಬಂದಿದೆ" ಎಂದು ಅವರು ತಿಳಿಸಿದ್ದಾರೆ.