ಟೋಕಿಯೋ:ಮಹಿಳೆಯರ 51ಕೆ.ಜಿ ವಿಭಾಗದ ಬಾಕ್ಸಿಂಗ್ನ ಫ್ರೀ ಕ್ವಾರ್ಟರ್ ಫೈನಲ್ನಲ್ಲಿ ದಿಟ್ಟ ಹೋರಾಟ ನೀಡಿದ ಹೊರತಾಗಿಯೂ ಕೂಡ 38 ವರ್ಷದ ಮೇರಿ ಕೋಮ್ 2-3 ಅಂತರದಿಂದ ಸೋಲು ಕಂಡರು. ಈ ಮೂಲಕ ಟೋಕಿಯೋ ಒಲಿಂಪಿಕ್ಸ್ನಲ್ಲಿ ಸೋಲಿನೊಂದಿಗೆ ತಮ್ಮ ಅಭಿಯಾನ ಮುಗಿಸಿದರು. ಆದರೆ ಇವರ ಪ್ರದರ್ಶನಕ್ಕೆ ಮಾತ್ರ ಎಲ್ಲರೂ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ನಾಲ್ಕು ಮಕ್ಕಳ ತಾಯಿಯಾಗಿರುವ ಮೇರಿ ಕೋಮ್ ಈಗಾಗಲೇ ಆರು ಬಾರಿ ವಿಶ್ವ ಬಾಕ್ಸಿಂಗ್ ಚಾಂಪಿಯನ್ ಆಗಿದ್ದಾರೆ. ಈ ಸಲದ ಒಲಿಂಪಿಕ್ಸ್ನಲ್ಲಿ ಭಾರತಕ್ಕೆ ಮತ್ತೊಂದು ಪದಕ ಗೆದ್ದು ಕೊಡುತ್ತಾರೆಂಬ ಇರಾದೆ ಇಟ್ಟುಕೊಳ್ಳಲಾಗಿತ್ತು. ಆದರೆ 16ನೇ ಸುತ್ತಿನ ಹೋರಾಟದಲ್ಲಿ ಕೊಲಂಬಿಯಾದ ಇಂಗ್ರಿಟ್ ವಲೆನ್ಸಿಯಾ ವಿರುದ್ಧ ಕಣಕ್ಕಿಳಿದಿದ್ದ ಭಾರತದ ಸ್ಟಾರ್ ಬಾಕ್ಸರ್ ಮೇರಿ ಕೋಮ್ ಕೊನೆ ಕ್ಷಣದಲ್ಲಿ ಸೋಲು ಕಾಣುವ ಮೂಲಕ ನಿರಾಸೆಗೊಳಗಾದರು. ಈ ವೇಳೆ ಎದುರಾಳಿ ಸವಾಲು ಮೆಟ್ಟಿ ನಿಲ್ಲುವಲ್ಲಿ ವಿಫಲಗೊಂಡಿದ್ದರಿಂದ ಮತ್ತೊಮ್ಮೆ ಪದಕ ಗೆಲ್ಲುವ ಕನಸು ಭಗ್ನಗೊಂಡಿತು.