ಮೆಹ್ಸಾನಾ (ಗುಜರಾತ್):ರಾಷ್ಟ್ರೀಯ ಕ್ರೀಡಾ ದಿನವಾದ ಇಂದೇ ಟೋಕಿಯೋ ಪ್ಯಾರಾಲಿಂಪಿಕ್ಸ್ ಕ್ರೀಡಾಕೂಟದಲ್ಲಿ ಬೆಳ್ಳಿ ಪದಕಕ್ಕೆ ಮುತ್ತಿಕ್ಕಿ ದೇಶಕ್ಕೆ ಕೀರ್ತಿ ತಂದಿರುವ ಭಾರತದ ಟೇಬಲ್ ಟೆನ್ನಿಸ್ ಆಟಗಾರ್ತಿ ಭಾವಿನಾ ಪಟೇಲ್ ಅವರ ಸ್ವಗ್ರಾಮದಲ್ಲಿ ಸಂಭ್ರಮ-ಸಡಗರ ಮನೆಮಾಡಿದೆ.
ಭಾವಿನಾ ಪಟೇಲ್, ಗುಜರಾತ್ನ ಮೆಹ್ಸಾನಾ ಜಿಲ್ಲೆಯ ಸಂಧಿಯಾ ಗ್ರಾಮದವರಾಗಿದ್ದು, ಪ್ಯಾರಾಲಿಂಪಿಕ್ಸ್‌ನಲ್ಲಿ ಪದಕ ಗೆದ್ದ ಎರಡನೇ ಭಾರತೀಯ ಮಹಿಳೆ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಪೈನಲ್ ಪಂದ್ಯದ ನೇರಪ್ರಸಾರವನ್ನು ಗ್ರಾಮದೊಳಗೆ ದೊಡ್ಡ ಸ್ರೀನ್ ಅಳವಡಿಸಿ ನೋಡಿದ ಗ್ರಾಮಸ್ಥರು ಬೆಳ್ಳಿ ಗೆಲ್ಲುತ್ತಿದ್ದಂತೆಯೇ ಚಪ್ಪಾಳೆಯ ಸುರಿಮಳೆಗೈದಿದ್ದಾರೆ. ಭಾವಿನಾ ಕುಟುಂಬಸ್ಥರು, ಸ್ನೇಹಿತರು ಹಾಗೂ ಗ್ರಾಮಸ್ಥರು ಸಾಂಪ್ರದಾಯಿಕ 'ಗರ್ಬಾ' ನೃತ್ಯ ಮಾಡಿ, ಪಟಾಕಿ ಸಿಡಿಸಿ ಸಂಭ್ರಮಿಸಿದ್ದಾರೆ.
ಇದನ್ನೂ ಓದಿ: ದೇಶಾದ್ಯಂತ 'ರಾಷ್ಟ್ರೀಯ ಕ್ರೀಡಾ ದಿನಾಚರಣೆ' ಸಂಭ್ರಮ: ಈ ದಿನದ ಮಹತ್ವ ಗೊತ್ತೇ?