ಬೆಲ್‌ಗ್ರೇಡ್:ಭಾರತದ ವಿನೇಶ್ ಫೋಗಟ್ ವಿಶ್ವ ಕುಸ್ತಿ ಚಾಂಪಿಯನ್‌ಶಿಪ್‌ನಲ್ಲಿ ಕಂಚಿನ ಪದಕ ಗೆದ್ದಿದ್ದಾರೆ. ವಿನೇಶ್ ಮಹಿಳೆಯರ 53 ಕೆ.ಜಿ. ವಿಭಾಗದಲ್ಲಿ ಸ್ವೀಡನ್‌ನ ಎಮ್ಮಾ ಜೊನ್ನಾ ವಿರುದ್ಧ 6-0 ಅಂತರದಲ್ಲಿ ಗೆದ್ದು ಕಂಚಿನ ಪದಕ ತಮ್ಮದಾಗಿಸಿಕೊಂಡಿದ್ದಾರೆ. ಈ ಸ್ಪರ್ಧೆಯಲ್ಲಿ ಎರಡು ಪದಕಗಳನ್ನು ಗೆದ್ದ ಮೊದಲ ಭಾರತೀಯ ಮಹಿಳಾ ಕುಸ್ತಿಪಟು ಎಂಬ ಹೆಗ್ಗಳಿಕೆಗೆ ಅವರು ಪಾತ್ರರಾಗಿದ್ದಾರೆ.
ಮಂಗಳವಾರ ನಡೆದ ಮೊದಲ ಸುತ್ತಿನಲ್ಲಿ ಏಷ್ಯನ್ ಚಾಂಪಿಯನ್‌ಶಿಪ್‌ನ ಬೆಳ್ಳಿ ಪದಕ ವಿಜೇತೆ ಮಂಗೋಲಿಯಾದ ಖುಲಾನ್ ಬತ್ಖುಯಾಗ್ ವಿರುದ್ಧ ಸೋತಿದ್ದರು. ಆದರೆ ಖುಲಾನ್ ಫೈನಲ್ ಪ್ರವೇಶಿಸಿದ್ದರಿಂದ ವಿನೇಶ್‌ಗೆ ರಿಪಿಕೇಜ್ ಸುತ್ತಿನಲ್ಲಿ ಸ್ಪರ್ಧಿಸುವ ಅವಕಾಶ ದೊರೆಯಿತು.