ಕ್ರೈಸ್ಟ್‌ಚರ್ಚ್ (ನ್ಯೂಜಿಲ್ಯಾಂಡ್): ಟೀಂ ಇಂಡಿಯಾದ ಸಂಪ್ರದಾಯಿಕ ಮತ್ತು ತಾತ್ಕಾಲಿಕ ಬ್ಯಾಟಿಂಗ್ ಶೈಲಿಯಿಂದಾಗಿ ಮೊದಲ ಟೆಸ್ಟ್ ಪಂದ್ಯದಲ್ಲಿ ಸೋಲು ಅನುಭವಿಸಬೇಕಾಯ್ತು ಎಂದು ಭಾರತ ತಂಡದ ಕೋಚ್ ರವಿಶಾಸ್ತ್ರಿ ಹೇಳಿದ್ದಾರೆ.
ರವಿಶಾಸ್ತ್ರಿ, ಟೀಂ ಇಂಡಿಯಾ ಕೋಚ್ ಸಾಂಪ್ರದಾಯಿಕ ಮತ್ತು ತಾತ್ಕಾಲಿಕ ಶೈಲಿಯಿಂದಾಗಿ ಮೊದಲ ಟೆಸ್ಟ್ ಪಂದ್ಯದಲ್ಲಿ ನಾವು ಸೋಲು ಕಂಡೆವು. ಮುಂದಿನ ಪಂದ್ಯದಲ್ಲಿ ಇದು ಪುನರಾವರ್ತನೆ ಆಗುವುದಿಲ್ಲ. ಪ್ರತಿಯೊಬ್ಬ ಆಟಗಾರರೂ ಇಲ್ಲಿನ ಕಂಡಿಷನ್ಗೆ ಹೊಂದಿಕೊಳ್ಳಬೇಕು ಎಂದು ಶಾಸ್ತ್ರಿ ಹೇಳಿದ್ದಾರೆ.
ವಿಶೇಷವಾಗಿ ಇಂಗ್ಲೆಂಡ್ ಮತ್ತು ನ್ಯೂಜಿಲ್ಯಾಂಡ್ನಲ್ಲಿ ಟೆಸ್ಟ್ ಮತ್ತು ಏಕದಿನ ಕ್ರಿಕೆಟ್ನಲ್ಲಿನ ಪರಿಸ್ಥಿತಿಗಳು ಸಂಪೂರ್ಣವಾಗಿ ಭಿನ್ನವಾಗಿವೆ. ಯಾವುದೇ ತಂಡಕ್ಕಾದರೂ ಒಗ್ಗಿಕೊಳ್ಳೋಕೆ ಸ್ವಲ್ಪ ಸಮಯಾವಕಾಶ ಬೇಕಾಗುತ್ತದೆ. ಪ್ರತಿ ಪಂದ್ಯದಲ್ಲೂ ಆಟಗಾರರಿಗೆ ಒಂದೊಂದು ಪಾಠವಿದ್ದೇ ಇರುತ್ತದೆ. ನಾಳಿನ ಪಂದ್ಯದಲ್ಲಿ ಕೊಹ್ಲಿ ಪಡೆಯ ಉತ್ತಮ ಪ್ರದರ್ಶನ ತೋರುತ್ತದೆ ಎಂದು ರವಿಶಾಸ್ತ್ರಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಟೀಂ ಇಂಡಿಯಾ ಆಟಗಾರರಿಂದ ಅಭ್ಯಾಸ ಟೆಸ್ಟ್ ಚಾಂಪಿಯನ್ಶಿಪ್ನಲ್ಲಿ ಮೊದಲ ಸೋಲು ಕಂಡಿರುವ ಟೀಂ ಇಂಡಿಯಾ ನಾಳಿನಿಂದ ಆರಂಭವಾಗಲಿರುವ ದ್ವಿತೀಯ ಟೆಸ್ಟ್ ಪಂದ್ಯದಲ್ಲಿ ತಿರುಗೇಟು ಕೊಡುವ ಭರವಸೆ ಹೊಂದಿದ್ದು, ನೆಟ್ನಲ್ಲಿ ಸಾಕಷ್ಟು ಬೆವರು ಹರಿಸಿದೆ.