ಯೂಜೀನ್ (ಒರೆಗನ್, ಅಮೆರಿಕ):ಟೋಕಿಯೊ ಒಲಿಂಪಿಕ್ಸ್ ಜಾವೆಲಿನ್ ಚಾಂಪಿಯನ್ ನೀರಜ್ ಚೋಪ್ರಾ, ಈಗ ವಿಶ್ವ ಅಥ್ಲೆಟಿಕ್ಸ್ ಚಾಂಪಿಯನ್‌ಶಿಪ್‌ನಲ್ಲಿ ಬೆಳ್ಳಿ ಪದಕಕ್ಕೆ ಕೊರಳೊಡ್ಡಿದ್ದಾರೆ. ಚಾಂಪಿಯನ್‌ಶಿಪ್‌ನ ನಾಲ್ಕನೇ ಪ್ರಯತ್ನದಲ್ಲಿ ನೀರಜ್ 88.13 ಮೀ. ದೂರ ಜಾವೆಲಿನ್ ಎಸೆಯುವ ಮೂಲಕ ರಜತ ಪದಕ ಪಡೆದರು. ತಮ್ಮ ಪ್ರಥಮ ಎಸೆತದಲ್ಲಿಯೇ 88.39 ಮೀಟರ್ ದೂರಕ್ಕೆ ಜಾವೆಲಿನ್ ಎಸೆಯುವ ಮೂಲಕ ನೀರಜ್ ಪೈನಲ್ ಪ್ರವೇಶಿಸಿದ್ದರು.
ವಿಶ್ವ ಅಥ್ಲೆಟಿಕ್ಸ್ ಚಾಂಪಿಯನ್‌ಶಿಪ್‌ನಲ್ಲಿ ಐತಿಹಾಸಿಕ ಬೆಳ್ಳಿ ಗೆದ್ದ ನೀರಜ್ ಚೋಪ್ರಾ - javelin throw final
ವಿಶ್ವ ಅಥ್ಲೆಟಿಕ್ಸ್ ಚಾಂಪಿಯನ್‌ಶಿಪ್-2022ರಲ್ಲಿ ಭಾರತ ಜಾವೆಲಿನ್ ತಾರೆ ನೀರಜ್ ಚೋಪ್ರಾ ರಜತ ಪದಕಕ್ಕೆ ಮುತ್ತಿಕ್ಕಿದ್ದಾರೆ.
ವಿಶ್ವ ಅಥ್ಲೆಟಿಕ್ಸ್ ಚಾಂಪಿಯನ್‌ಶಿಪ್-2022: ಬೆಳ್ಳಿ ಗೆದ್ದ ನೀರಜ್ ಚೋಪ್ರಾ
ಗ್ರೆನೆಡಾ ದೇಶದ ಆ್ಯಂಡರ್ಸನ್ ಪೀಟರ್ಸ್ ಅವರು 90.54 ಮೀಟರ್ ದೂರ ಜಾವೆಲಿನ್ ಎಸೆದು ಚಿನ್ನ ಗೆದ್ದರು. ಈ ಮೂಲಕ ವಿಶ್ವ ಚಾಂಪಿಯನ್ ಆಗಿ ಹೊರಹೊಮ್ಮಿದರು.
ಇದನ್ನೂ ಓದಿ:ಎಬಿಡಿ ಹೊಡಿ ಬಡಿ ಆಟದ ಅದ್ಭುತ ವಿಡಿಯೋ.. ಅಭಿಮಾನಿ ಕೆಲಸಕ್ಕೆ ಸೆಲ್ಯೂಟ್ ಹೊಡೆದ ಮಿ. 360!
Last Updated : Jul 24, 2022, 10:40 AM IST