ಕರ್ನಾಟಕ

karnataka

ETV Bharat / sports

ವಿಶ್ವ ಕುಸ್ತಿ ಚಾಂಪಿಯನ್​ಶಿಪ್:​ ಭಾರತಕ್ಕೆ ಬಂಗಾರ ತಂದ ಪ್ರಿಯಾ ಮಲಿಕ್​ - ವಿಶ್ವ ಕುಸ್ತಿ ಚಾಂಪಿಯನ್‌ಶಿಪ್‌ ಅಪ್​ಡೇಟ್​

ಹಂಗೇರಿಯಲ್ಲಿ ನಡೆದ ವಿಶ್ವ ಕುಸ್ತಿ ಚಾಂಪಿಯನ್‌ಶಿಪ್‌ನಲ್ಲಿ ಭಾರತದ ಕುಸ್ತಿಪಟು ಪ್ರಿಯಾ ಮಲಿಕ್ ಚಿನ್ನ ಗೆದ್ದಿದ್ದಾರೆ.

Priya Malik
ಪ್ರಿಯಾ ಮಲಿಕ್

By

Published : Jul 25, 2021, 1:04 PM IST

ಹಂಗೇರಿ: ಹಂಗೇರಿಯಲ್ಲಿ ನಡೆದ ವಿಶ್ವ ಕುಸ್ತಿ ಚಾಂಪಿಯನ್‌ಶಿಪ್‌ನಲ್ಲಿ ಕುಸ್ತಿಪಟು ಪ್ರಿಯಾ ಮಲಿಕ್ ಚಿನ್ನ ಗೆದ್ದು ದೇಶದ ಕೀರ್ತಿ ಹೆಚ್ಚಿಸಿದ್ದಾರೆ. 75 ಕೆಜಿ ವಿಭಾಗದಲ್ಲಿ ಈ ಸಾಧನೆ ಮಾಡಿದ್ದಾರೆ. ಪ್ರಿಯಾ 5-0 ಅಂಕಗಳಿಂದ ಬೆಲಾರಸ್ ಕುಸ್ತಿಪಟುವನ್ನು ಸೋಲಿಸಿ ಗೆಲುವು ದಾಖಲಿಸಿದ್ದಾರೆ.

ಪ್ರಿಯಾ ಮಲಿಕ್ 2019ರಲ್ಲಿ ಪುಣೆಯ ಖೇಲೋ ಇಂಡಿಯಾದಲ್ಲಿ ಚಿನ್ನದ ಪದಕ, ದೆಹಲಿಯಲ್ಲಿ ನಡೆದ 17ನೇ ಶಾಲಾ ಕ್ರೀಡಾಕೂಟದಲ್ಲಿ ಚಿನ್ನದ ಪದಕ ಮತ್ತು 2020ರಲ್ಲಿ ಪಾಟ್ನಾದಲ್ಲಿ ನಡೆದ ರಾಷ್ಟ್ರೀಯ ಕೆಡೆಟ್ ಚಾಂಪಿಯನ್‌ಶಿಪ್‌ನಲ್ಲಿ ಚಿನ್ನದ ಪದಕ ಗೆದ್ದಿದ್ದರು.

ಪ್ರಿಯಾ ಸಾಧನೆಗೆ ಗಣ್ಯರಿಂದ ಶುಭಾಶಯಗಳ ಮಹಾಪೂರವೇ ಹರಿದುಬಂದಿದೆ. ಕಳೆದ ದಿನ ಟೋಕಿಯೋ ಕ್ರೀಡಾಕೂಟದಲ್ಲಿ ಮೀರಾಬಾಯಿ ಚಾನು ಬೆಳ್ಳಿ ಗೆದ್ದು, ಒಲಿಂಪಿಕ್​ನಲ್ಲಿ ಖಾತೆ ತೆರೆದಿದ್ದರು.

ABOUT THE AUTHOR

...view details