ಹುಬ್ಬಳ್ಳಿ:ಧಾರವಾಡದ ಕುಬ್ಜ ಕ್ರೀಡಾಪಟು ದೇವಪ್ಪ ಮೋರೆ ಅಂತಾರಾಷ್ಟ್ರೀಯ ಮಟ್ಟದಲ್ಲಿ ಜಿಲ್ಲೆಯ ಕೀರ್ತಿಯ ಪತಾಕೆಯನ್ನು ಹಾರಿಸಿದ್ದಾರೆ. ಧಾರವಾಡ ಜಿಲ್ಲೆಯ ಕಲಘಟಗಿ ತಾಲೂಕಿನ ಕಾಡನಕೊಪ್ಪ ಗ್ರಾಮದ ಪ್ರತಿಭೆ ದೇವಪ್ಪ ಮೋರೆ ಕುಬ್ಜರ ಅಂತಾರಾಷ್ಟ್ರೀಯ ಕ್ರೀಡಾಕೂಟದಲ್ಲಿ ಭಾಗವಹಿಸುವ ಮೂಲಕ 60 ಮೀಟರ್ ಹಾಗೂ 100 ಮೀಟರ್ ಅಥ್ಲೆಟಿಕ್ಸ್ ನಲ್ಲಿ ಚಿನ್ನದ ಪದಕಗಳನ್ನು ಗೆದ್ದು ಬೀಗಿದ್ದಾರೆ.
ಜರ್ಮನ್ ದೇಶದಲ್ಲಿ ನಡೆದ ಅಂತಾರಾಷ್ಟ್ರೀಯ ಕುಬ್ಜರ ಅಥ್ಲೆಟಿಕ್ಸ್ನಲ್ಲಿ ಭಾರತವನ್ನು ಪ್ರತಿನಿಧಿಸಿದ್ದ ದೇವಪ್ಪ ಮೋರೆ 60 ಮತ್ತು 100 ಮೀಟರ್ ಓಟದಲ್ಲಿ ಪ್ರಥಮ ಸ್ಥಾನವನ್ನು ಪಡೆದಿದ್ದಾರೆ. ಬಡತನದಲ್ಲಿಯೇ ಸಾಧನೆಗೆ ಸೂಕ್ತವಾದ ತಯಾರಿ ನಡೆಸಿದ್ದ ದೇವಪ್ಪ ಮೋರೆ ಜರ್ಮನ್ ದೇಶಕ್ಕೆ ಹೋಗಲು ಆರ್ಥಿಕ ಸಮಸ್ಯೆ ಎದುರಿಸುತ್ತಿದ್ದರು. ಇದಕ್ಕಾಗಿ ಅವರು ಸಾಕಷ್ಟು ಪರಿಶ್ರಮಪಟ್ಟಿದ್ದರು. ಈ ಬಗ್ಗೆ ಈಟಿವಿ ಭಾರತಸುದ್ದಿ ಪ್ರಕಟಿಸಿತ್ತು. ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ ಸೇರಿದಂತೆ ಕ್ರೀಡಾಭಿಮಾನಿಗಳು ಆರ್ಥಿಕ ನೆರವು ನೀಡಿದ್ದರು. ಈಗ ದೇವಪ್ಪ ಮೋರೆಯವರು ಉತ್ತಮ ಸಾಧನೆ ಮಾಡುವ ಮೂಲಕ ಪ್ರಶಂಸೆಗೆ ಪಾತ್ರವಾಗಿದ್ದಾರೆ.
ದೇವಪ್ಪ ಮೋರೆ ಅವರ ಸಾಧನೆ: ರಾಷ್ಟ್ರದಲ್ಲಿ ನಡೆಯುವ ಕುಬ್ಜರ ಅಥ್ಲೆಟಿಕ್ಸ್ನಲ್ಲಿ 100, 200, 50 ಮೀಟರ್ ಓಟದಲ್ಲಿ ಚಿನ್ನ, ಬೆಳ್ಳಿ, ಕಂಚನ್ನು ಗೆಲ್ಲುವ ಮೂಲಕ ಸಾಧನೆ ಮಾಡಿದ್ದಾರೆ. ಅಮೆರಿಕ, ಕೆನಡಾದಲ್ಲಿ ನಡೆದಿರುವ ವಿಶ್ವ ಕುಬ್ಜರ ಕ್ರೀಡಾಕೂಟದಲ್ಲಿ ಭಾಗವಹಿಸಿ ಪದಕಗಳನ್ನು ಗೆದ್ದುಕೊಂಡಿದ್ದಾರೆ. ಚೆನ್ನೈನಲ್ಲಿ ನಡೆದ ಟ್ರಯಲ್ಸ್‌ನಲ್ಲಿ 50, 100, 200 ಮೀ. ಓಟಕ್ಕೆ ದೇವಪ್ಪ ಮೋರೆ ಆಯ್ಕೆಯಾಗಿದ್ದರು.