ಸೋನಿಪತ್/ ಹರಿಯಾಣ: ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಕೃಷಿ ಕಾನೂನುಗಳ ವಿರುದ್ಧ ರೈತರು ನಡೆಸುತ್ತಿರುವ ದೆಹಲಿ ಚಲೋ ಚಳವಳಿಯನ್ನ ಕುಸ್ತಿಪಟು ಭಜರಂಗ್ ಪೂನಿಯಾ ಬೆಂಬಲಿಸಿ ವಿಡಿಯೋ ಬಿಡುಗಡೆ ಮಾಡಿದ್ದಾರೆ. ಈ ವಿಡಿಯೋದಲ್ಲಿ ಇದಕ್ಕೆ ಸಂಬಂಧಿಸಿದ ಅಧಿಕಾರಿಗಳು ಇದನ್ನ ಬೇಗೆ ಬಗೆಹರಿಸುವಂತೆ ಮನವಿ ಮಾಡಿದ್ದಾರೆ.
ಅನ್ನದಾತನ ಚಳವಳಿಗೆ ರಾಜಕೀಯ ಬಣ್ಣ ನೀಡಬೇಡಿ ಎಂದು ರಾಜಕಾರಣಿಗಳಿಗೆ ಮನವಿ ಮಾಡಿದ್ದಾರೆ. ಅಷ್ಟೇ ಅಲ್ಲ, ರೈತರ ಆಂದೋಲನ ಮತ್ತು ಕೃಷಿ ಕಾನೂನಿನ ಬಗ್ಗೆ ರಾಜಕೀಯ ಮಾಡಬೇಡಿ ಎಂದೂ ಮನವಿ ಮಾಡಿದ್ದಾರೆ. ರೈತರ ಸಮಸ್ಯೆಗಳನ್ನು ಶೀಘ್ರದಲ್ಲೇ ಪರಿಹರಿಸಬೇಕೆಂದು ಅವರು ಸರ್ಕಾರವನ್ನು ಕೇಳಿದ್ದಾರೆ. ಇದೇ ಸಂದರ್ಭದಲ್ಲಿ ಅವರು ಶಾಂತಿಯುತವಾಗಿ ಚಳವಳಿ ನಡೆಸುವಂತೆ ರೈತರಿಗೆ ಮನವಿ ಮಾಡಿದ್ದಾರೆ.