ನವದೆಹಲಿ: ಬಿಜೆಪಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರ ನಿವಾಸದಲ್ಲಿ ಅನುಮಾನಾಸ್ಪದ ವ್ಯಕ್ತಿಯನ್ನು ದೆಹಲಿ ಪೊಲೀಸರು ಶುಕ್ರವಾರ ಬಂಧಿಸಿದ್ದಾರೆ. ಪೊಲೀಸ್ ಮೂಲಗಳ ಪ್ರಕಾರ, ಈ ವ್ಯಕ್ತಿ ಬ್ರಿಜ್ ಭೂಷಣ್ ಅವರ ನಿವಾಸದಲ್ಲಿದ್ದ ಸಿಬ್ಬಂದಿಯಿಂದ ಆತನ ಬಗ್ಗೆ ವಿಚಾರಿಸುತ್ತಿದ್ದ. ಅನುಮಾನ ಬಂದಾಗ ಸಿಬ್ಬಂದಿ ಪಿಸಿಆರ್ಗೆ ಕರೆ ಮಾಡಿದ್ದಾರೆ. ಪೊಲೀಸರು ಸ್ಥಳಕ್ಕೆ ಆಗಮಿಸಿ ಆತನನ್ನು ವಶಕ್ಕೆ ಪಡೆದಿದ್ದಾರೆ.
ದೆಹಲಿ ಪೊಲೀಸ್ ಮೂಲಗಳ ಪ್ರಕಾರ, ಈ ವ್ಯಕ್ತಿ ಶುಕ್ರವಾರ ಬೆಳಗ್ಗೆ ಬ್ರಿಜ್ ಭೂಷಣ್ ಅವರ ನಿವಾಸವನ್ನು ತಲುಪಿದ್ದಾನೆ ಮತ್ತು ಸಿಬ್ಬಂದಿಯಿಂದ ಅವರ ಬಗ್ಗೆ ವಿಚಾರಿಸುತ್ತಿದ್ದರು. ಸಿಬ್ಬಂದಿಗೆ ಅನುಮಾನ ಬಂದು ಪಿಸಿಆರ್ ಕರೆ ಮಾಡಿದ್ದಾರೆ. ಮಾಹಿತಿ ಬಂದಾಕ್ಷಣ ಸ್ಥಳಕ್ಕೆ ದೌಡಾಯಿಸಿ ಆತನನ್ನು ವಶಕ್ಕೆ ಪಡೆಯಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಪೊಲೀಸರು ಯುವಕನನ್ನು ವಿಚಾರಣೆ ನಡೆಸುತ್ತಿದ್ದು, ಆತ ಬಿಜೆಪಿ ಸಂಸದರ ನಿವಾಸಕ್ಕೆ ಏಕೆ ಬಂದಿದ್ದ ಮತ್ತು ಸಿಬ್ಬಂದಿಯನ್ನು ಏನು ಕೇಳುತ್ತಿದ್ದ ಎಂದು ತಿಳಿಯಲು ಪ್ರಯತ್ನಿಸುತ್ತಿದ್ದಾರೆ. ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧ ನಡೆಯುತ್ತಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಆ ಯುವಕ ಮಾಹಿತಿ ಪಡೆಯುತ್ತಿದ್ದಾನೋ ಅಥವಾ ಪ್ರಕರಣದ ಮೇಲೆ ಯಾವುದೇ ರೀತಿಯಲ್ಲಿ ಪ್ರಭಾವ ಬೀರಲು ಪ್ರಯತ್ನಿಸುತ್ತಿದ್ದಾನೋ, ಇಲ್ಲ ಯಾರದಾದ್ರೂ ಸಲಹೆ ಮೇರೆಗೆ ಸಂಸದರ ನಿವಾಸಕ್ಕೆ ಬಂದಿದ್ದಾನೋ ಎಂಬುದು ಸೇರಿದಂತೆ ಇತರ ವಿಷಯಗಳ ಕುರಿತು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಗಮನಾರ್ಹವೆಂದರೆ, ಮಹಿಳಾ ಕುಸ್ತಿಪಟುಗಳು ಸಂಸದರ ಮೇಲೆ ಲೈಂಗಿಕ ಶೋಷಣೆಯ ಆರೋಪ ಮಾಡಿದ್ದಾರೆ. ಈ ಪ್ರಕರಣದಲ್ಲಿ ದೆಹಲಿ ಪೊಲೀಸರು ಗುರುವಾರ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದ್ದಾರೆ. ಸಿಂಗ್ ವಿರುದ್ಧ ಸಲ್ಲಿಸಿರುವ ಚಾರ್ಜ್‌ಶೀಟ್‌ನಲ್ಲಿ ಮಹಿಳಾ ಕುಸ್ತಿಪಟುಗಳ ಕಿರುಕುಳಕ್ಕೆ ಸಂಬಂಧಿಸಿದ 25 ಜನರ ಹೇಳಿಕೆಗಳಿಗೆ ಪ್ರಾಮುಖ್ಯತೆ ನೀಡಲಾಗಿದೆ. ಈ ವ್ಯಕ್ತಿಯನ್ನೂ ವಿಚಾರಣೆಗೊಳಪಡಿಸಲಾಗಿದೆಯೇ ಅಥವಾ ಬೇರೆ ವ್ಯಕ್ತಿ ಎಂಬುದನ್ನೂ ಪರಿಶೀಲಿಸಲಾಗುತ್ತಿದೆ.