ನವದೆಹಲಿ:ವಿಶ್ವದಾದ್ಯಂತ ಕೋಟ್ಯಂತರ ಅಭಿಮಾನಿಗಳನ್ನು ಹೊಂದಿರುವ wwe ಕುಸ್ತಿಪಟು ಜಾನ್ ಸೀನಾ ತಮ್ಮ ಇನ್ಸ್ಟಾಗ್ರಾಂ ಖಾತೆಯಲ್ಲಿ ಕೊರೊನಾ ಸೋಂಕು ತಗಲಿ ಆಸ್ಪತ್ರೆಯಲ್ಲಿರುವ ಅಮಿತಾಬ್ ಬಚ್ಚನ್ ಹಾಗೂ ಅಭಿಷೇಕ್ ಬಚ್ಚನ್ ಫೋಟೋವನ್ನು ತಮ್ಮ ಟ್ವಿಟರ್ನಲ್ಲಿ ಶೇರ್ ಮಾಡಿಕೊಂಡಿದ್ದಾರೆ.
ಅಮಿತಾಬ್,ಅಭಿಷೇಕ್ ಬಚ್ಚನ್ ಫೋಟೋ ಶೇರ್ ಮಾಡಿಕೊಂಡ WWE ಸ್ಟಾರ್ ಜಾನ್ ಸೀನಾ - WWE super star john cena post on Amitabh
ವಿಶ್ವದೆಲ್ಲೆಡೆ ಪ್ರಸಿದ್ಧಿಯಾಗಿರುವ wwe ನಲ್ಲಿ 16 ಬಾರಿ ವಿಶ್ವಚಾಂಪಿಯನ್ ಆಗಿರುವ ಜಾನ್ಸೀನಾ ಇನ್ಸ್ಟಾಗ್ರಾಮ್ನಲ್ಲಿ ಹಲವು ಬಾರಿ ಭಾರತೀಯರ ಫೋಟೋಗಳನ್ನು ಶೇರ್ ಮಾಡಿಕೊಂಡಿದ್ದಾರೆ.
ವಿಶ್ವದೆಲ್ಲೆಡೆ ಪ್ರಸಿದ್ಧಿಯಾಗಿರುವ wweನಲ್ಲಿ 16 ಬಾರಿ ವಿಶ್ವಚಾಂಪಿಯನ್ ಆಗಿರುವ ಜಾನ್ಸೀನಾ ಇನ್ಸ್ಟಾಗ್ರಾಮ್ನಲ್ಲಿ ಹಲವು ಬಾರಿ ಭಾರತೀಯರ ಫೋಟೋಗಳನ್ನು ಶೇರ್ ಮಾಡಿಕೊಂಡಿದ್ದಾರೆ. ವಿಚಿತ್ರ ಎಂದರೆ ಫೋಟೋಗೆ ಯಾವುದೇ ತಲೆಬರಹ ಅಥವಾ ಅಡಿಬರಹ ನೀಡುವುದಿಲ್ಲ. ಅದೇ ರೀತಿ ಸೀನಾ ಬಾಲಿವುಡ್ನ ಸ್ಟಾರ್ ನಟ ಅಮಿತಾಬ್ ಬಚ್ಚನ್ ಅವರಿಗೆ ಕೋವಿಡ್ 19 ಪಾಸಿಟಿವ್ ವರದಿ ಬಂದಿದ್ದು, ಅವರು ಕೋಕಿಲಬೆನ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಈ ಸಂದರ್ಭದಲ್ಲಿ ಅಮೆರಿಕದ ಈ ರೆಸ್ಲರ್ ಕಮ್ ಆಕ್ಟರ್ ಆಗಿರುವ ಜಾನ್ ಸೀನಾ ಅಮಿತಾಬ್ ಹಾಗೂ ಅಭಿಷೇಕ್ ಬಚ್ಚನ್ ಅವರ ಫೋಟೋಗಳನ್ನು ತಮ್ಮ ಇನ್ಸ್ಟಾಗ್ರಾಂನಲ್ಲಿ ಶೇರ್ ಮಾಡಿಕೊಂಡಿದ್ದಾರೆ. ಜಾನ್ ಸೀನಾ ಇತ್ತೀಚೆಗೆ ನಿಧನರಾದ ಸುಶಾಂತ್ ಸಿಂಗ್ ರಜಪೂತ್, ರಿಷಿ ಕಪೂರ್, ಇರ್ಫಾನ್ ಖಾನ್ರ ಫೋಟೋಗಳನ್ನು ಶೇರ್ ಮಾಡಿಕೊಂಡಿದ್ದರು. ಅದಕ್ಕೂ ಮೊದಲು ಬಾಲಿವುಡ್ ನಟರಾದ ಶಾರುಖ್ ಖಾನ್, ರಣವೀರ್ ಸಿಂಗ್, ಅಮಿತಾಬ್ ಬಚ್ಚನ್ ಹಾಗೂ ಕ್ರಿಕೆಟಿಗರಾದ ವಿರಾಟ್ ಕೊಹ್ಲಿ, ರಾಹುಲ್ ದ್ರಾವಿಡ್ರ ಫೋಟೋಗಳನ್ನು ತಮ್ಮ ಇನ್ಸ್ಟಾಗ್ರಾಮ್ನಲ್ಲಿ ಶೇರ್ ಮಾಡಿಕೊಂಡಿದ್ದರು.