ಅಬುಧಾಬಿ:ಅಬುಧಾಬಿ ಕ್ರಿಕೆಟ್ ಸ್ಟೇಡಿಯಂನ ಭಾರತೀಯ ಮುಖ್ಯ ಕ್ಯುರೇಟರ್ ಮೋಹನ್ ಸಿಂಗ್ ಅವರು ತಮ್ಮ ಕೋಣೆಯಲ್ಲಿ ಶವವಾಗಿ ಪತ್ತೆಯಾಗಿದ್ದಾರೆ.
ಭಾನುವಾರ ನಡೆದ ಅಫ್ಘಾನಿಸ್ತಾನ ಮತ್ತು ನ್ಯೂಜಿಲೆಂಡ್ ವಿರುದ್ಧದ ಪಂದ್ಯದ ಆರಂಭಕ್ಕೂ ಮುನ್ನ ಈ ಘಟನೆ ಬೆಳಕಿಗೆ ಬಂದಿದೆ. ಉತ್ತರಾಖಂಡದ ಮೂಲದ 45 ವರ್ಷದ ಮೋಹನ್ಸಿಂಗ್ ಅವರು ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದರು. ನ್ಯೂಜಿಲೆಂಡ್- ಅಫ್ಘಾನಿಸ್ತಾನ ಪಂದ್ಯಕ್ಕೆ ಪಿಚ್ ಸಿದ್ಧಪಡಿಸಿದ್ದರು. ಬಳಿಕ ಕೋಣೆ ಸೇರಿದ್ದ ಅವರು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದರು ಎಂದು ಯುಎಇ ಕ್ರಿಕೆಟ್ ಮೂಲಗಳು ತಿಳಿಸಿವೆ.