ದುಬೈ:ಐಸಿಸಿ ಟಿ-20 ವಿಶ್ವಕಪ್ನಲ್ಲಿ ಭಾಗಿಯಾಗಿರುವ ಆಫ್ಘಾನಿಸ್ತಾನದ ಬ್ಯಾಟರ್ ಆಸ್ಗರ್ ಆಫ್ಘಾನ್ ಅಂತಾರಾಷ್ಟ್ರೀಯ ಕ್ರಿಕೆಟ್ಗೆ ದಿಢೀರ್ ನಿವೃತ್ತಿ ಘೋಷಣೆ ಮಾಡಿದ್ದಾರೆ. ಇಂದು ನಮೀಬಿಯಾ ವಿರುದ್ಧ ನಡೆಯಲಿರುವ ಪಂದ್ಯ ಅವರ ವೃತ್ತಿ ಜೀವನದ ಕೊನೆಯ ಪಂದ್ಯವಾಗಲಿದೆ.
33 ವರ್ಷದ ಕ್ರಿಕೆಟರ್ ಅಸ್ಗರ್ ಅಫ್ಗಾನ್ ಇಲ್ಲಿಯವರೆಗೆ 6 ಟೆಸ್ಟ್ ಪಂದ್ಯ, 114 ಅಂತಾರಾಷ್ಟ್ರೀಯ ಏಕದಿನ ಹಾಗೂ 75 ಟಿ-20 ಪಂದ್ಯಗಳಲ್ಲಿ ಭಾಗಿಯಾಗಿದ್ದು, 4,215ರನ್ಗಳಿಕೆ ಮಾಡಿದ್ದಾರೆ. ಜೊತೆಗೆ 115 ಪಂದ್ಯಗಳಲ್ಲಿ ಅಫ್ಘಾನಿಸ್ತಾನ ತಂಡ ಮುನ್ನಡೆಸಿದ್ದಾರೆ
ಅಫ್ಘಾನಿಸ್ತಾನ ಟೆಸ್ಟ್ ತಂಡದ ಮೊದಲ ಕ್ಯಾಪ್ಟನ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿರುವ ಈ ಆಟಗಾರ 2018ರಲ್ಲಿ ಇಂಡಿಯಾ ವಿರುದ್ಧದ ಟೆಸ್ಟ್ ಪಂದ್ಯದಲ್ಲಿ ಡೆಬ್ಯು ಮಾಡಿದ್ದರು. 59 ಏಕದಿನ ಪಂದ್ಯಗಳಲ್ಲಿ ಕ್ಯಾಪ್ಟನ್ ಆಗಿ ತಂಡ ಮುನ್ನಡೆಸಿದ್ದು, ಇದರಲ್ಲಿ 34 ಗೆಲುವು ಹಾಗೂ 21 ಸೋಲು ಕಂಡಿದೆ. 52 ಟಿ-20 ಪಂದ್ಯಗಳಲ್ಲಿ ನಾಯಕನಾಗಿ 42 ಪಂದ್ಯಗಳಲ್ಲಿ ಗೆಲುವು ಸಾಧಿಸಿದ್ದಾರೆ.