ಶಾರ್ಜಾ(ದುಬೈ) :ವಿಶ್ವಕಪ್ ಟೂರ್ನಿಯ ಗ್ರೂಪ್ ಎ ಸೂಪರ್ 12 ಹಂತದ ಇಂದಿನ ಬಾಂಗ್ಲಾದೇಶ ಹಾಗೂ ವೆಸ್ಟ್ ಇಂಡೀಸ್ ನಡುವಿನ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ನಡೆಸಿದ ವೆಸ್ಟ್ ಇಂಡೀಸ್ ತಂಡ ನಿಗದಿತ ಓವರ್ ಮುಕ್ತಾಯಕ್ಕೆ 142 ರನ್ಗಳಿಸಿದೆ.
ಟಾಸ್ ಗೆದ್ದು ಬೌಲಿಂಗ್ ಆಯ್ದುಕೊಂಡ ಬಾಂಗ್ಲಾ ತಂಡ ವಿಂಡೀಸ್ ಪಡೆಯನ್ನ ಕಟ್ಟಿ ಹಾಕಿತು. ಆರಂಭಿಕರಾದ ಕ್ರಿಸ್ ಗೇಲ್ ಹಾಗೂ ಲೆವಿಸ್ ಬಹುಬೇಗ ವಿಕೆಟ್ ಒಪ್ಪಿಸಿದರೆ. ಬಳಿಕ ಕ್ರೀಸ್ಗಿಳಿದ ರೋಸ್ಟನ್ ಚೇಸ್ 46 ಎಸೆತದಲ್ಲಿ 39ರನ್ ಗಳಿಸಿ ತಂಡಕ್ಕೆ ನೆರವಾದರು.