ಶಾರ್ಜಾ(ದುಬೈ) :ವಿಶ್ವಕಪ್ನಲ್ಲಿ ಈಗಾಗಲೇ ಆಡಿರುವ ಎರಡು ಪಂದ್ಯಗಳಲ್ಲಿ ಸೋಲು ಕಂಡಿರುವ ಬಾಂಗ್ಲಾದೇಶ ಹಾಗೂ ಹಾಲಿ ಚಾಂಪಿಯನ್ ವೆಸ್ಟ್ ಇಂಡೀಸ್ ತಂಡಗಳು ಇಂದಿನ ಪಂದ್ಯದಲ್ಲಿ ಮುಖಾಮುಖಿಯಾಗುತ್ತಿವೆ. ಇದೀಗ ಟಾಸ್ ಗೆದ್ದಿರುವ ಬಾಂಗ್ಲಾದೇಶ ತಂಡ ಬೌಲಿಂಗ್ ಆಯ್ದುಕೊಂಡಿದೆ.
ಶಾರ್ಜಾ ಮೈದಾನದಲ್ಲಿ ಪಂದ್ಯ ನಡೆಯಲಿದೆ. ಬಲಿಷ್ಠ ವೆಸ್ಟ್ ಇಂಡೀಸ್ ತಂಡ ಬಾಂಗ್ಲಾ ಹುಲಿಗಳ ವಿರುದ್ಧ ತಿರುಗಿ ಬೀಳುವ ಸಾಧ್ಯತೆ ಇದೆ. ಕಳೆದ ವಿಶ್ವಕಪ್ನಲ್ಲಿ ಭರ್ಜರಿ ಪ್ರದರ್ಶನ ನೀಡಿ ಚಾಂಪಿಯನ್ ಆಗಿದ್ದ ವೆಸ್ಟ್ ಇಂಡೀಸ್ ಈ ಸಲ ಸಂಪೂರ್ಣವಾಗಿ ವೈಫಲ್ಯ ಅನುಭವಿಸುತ್ತಿದೆ. ತಾನು ಆಡಿರುವ ಇಂಗ್ಲೆಂಡ್ ವಿರುದ್ಧದ ಮೊದಲ ಪಂದ್ಯದಲ್ಲಿ ಕೇವಲ 55 ರನ್ಗಳಿಗೆ ಆಲೌಟ್ ಆಗಿದ್ದರೆ, 2ನೇ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧ ಮುಗ್ಗರಿಸಿದೆ.