ಆಸ್ಟ್ರೇಲಿಯನ್ ಓಪನ್ ಟೆನಿಸ್ ಟೂರ್ನಿ ಇನ್ನೇನು ಮುಕ್ತಾಯದ ಹಂತ ತಲುಪಿದೆ. ಇಂದು ನಡೆದ ಸೆಮಿಫೈನಲ್ ಪಂದ್ಯದಲ್ಲಿ ರಷ್ಯಾದ ಡ್ಯಾನಿಲ್ ಮೆಡ್ವೆಡೆವ್ ಗ್ರೀಕ್ನ ಸ್ಟೆಫಾನೊಸ್ ಸಿಟ್ಸಿಪಾಸ್ರನ್ನು ಸೋಲಿಸಿ ಫೈನಲ್ ಪ್ರವೇಶಿಸಿದ್ದಾರೆ.
ಆಸ್ಟ್ರೇಲಿಯನ್ ಓಪನ್ ಫೈನಲ್ನಲ್ಲಿ ನೊವಾಕ್ ಜೊಕೊವಿಕ್ - ರಷ್ಯಾದ ಮೆಡ್ವೆಡೆವ್ ಮುಖಾಮುಖಿ - ನೊವಾಕ್ ಜೊಕೊವಿಕ್
ಡೇನಿಲ್ ಮೆಡ್ವೆಡೆವ್ ಆಸ್ಟ್ರೇಲಿಯಾ ಓಪ್ ಸಿಂಗಲ್ ಟೆನಿಸ್ ಟೂರ್ನಿಯ ಫೈನಲ್ ಪ್ರವೇಶಿಸಿದ್ದಾರೆ. ಇವರು ಭಾನುವಾರ ನಡೆಯಲಿರುವ ಫೈನಲ್ ಕಾದಾಟದಲ್ಲಿ ವಿಶ್ವದ ನಂಬರ್ ಒನ್ ಆಟಗಾರ ನೊವಾಕ್ ಜೊಕೊವಿಕ್ ವಿರುದ್ಧ ಕಣಕ್ಕಿಳಿಯಲಿದ್ದಾರೆ.
6-4, 6-2 ಹಾಗೂ 7-5ರ ಸೆಟ್ಗಳ ಅಂತರದಿಂದ ಭರ್ಜರಿ ಜಯ ದಾಖಲಿಸಿದ್ದು, ಆಸ್ಟ್ರೇಲಿಯಾ ಓಪ್ ಸಿಂಗಲ್ ಟೆನಿಸ್ ಟೂರ್ನಿಯ ಫೈನಲ್ ಪ್ರವೇಶಿಸಿದ್ದಾರೆ. ಇವರು ಭಾನುವಾರ ನಡೆಯಲಿರುವ ಫೈನಲ್ ಕಾದಾಟದಲ್ಲಿ ವಿಶ್ವದ ನಂಬರ್ ಒನ್ ಆಟಗಾರ ನೊವಾಕ್ ಜೊಕೊವಿಕ್ ವಿರುದ್ಧ ಕಣಕ್ಕಿಳಿಯಲಿದ್ದಾರೆ. ಜೊಕೊವಿಕ್ 9ನೇ ಬಾರಿ ಫೈನಲ್ಗೆ ಪ್ರವೇಶ ಪಡೆದಿದ್ದು, ವಿಶ್ವದ ನಾಲ್ಕನೆ ಶ್ರೇಯಾಂಕದ ಆಟಗಾರ ರಷ್ಯಾದ ಡ್ಯಾನಿಲ್ ಮೆಡ್ವೆಡೆವ್ ಅವರನ್ನು ಎದುರಿಸಲಿದ್ದಾರೆ.
ಇದನ್ನೂ ಓದಿ:ಆಸ್ಟ್ರೇಲಿಯನ್ ಓಪನ್: ಚೊಚ್ಚಲ ಗ್ರ್ಯಾಂಡ್ ಸ್ಲಾಮ್ ಫೈನಲ್ ಪ್ರವೇಶಿಸಿದ ಜನ್ನಿಫರ್ ಬ್ರಾಡಿಗೆ ಒಸಾಕ ಎದುರಾಳಿ