ಪ್ಯಾರಿಸ್ :ಫ್ರೆಂಚ್ ಓಪನ್ ಮಹಿಳಾ ಸಿಂಗಲ್ಸ್‌ನಲ್ಲಿ ಗ್ರ್ಯಾನ್ ಸ್ಲಾಮ್ ಪ್ರಶಸ್ತಿ ಜಯಸಿದ ಇಗಾ ಸ್ವಿಟೆಕ್ ತಮ್ಮ ಅಂತರಂಗದ ಮಾಹಿತಿ ಹಂಚಿಕೊಂಡಿದ್ದಾರೆ. ಫ್ರೆಂಚ್ ಓಪನ್ ಟೂರ್ನಿಯಲ್ಲಿ ಪ್ರದರ್ಶಿಸಿರುವ ಆಟ ಪುನರಾವರ್ತನೆ ಮಾಡುವುದು ಸವಾಲಿನ ಕೆಲಸವಾಗಿದ್ದು, ಒಸಾಕಾದಿಂದ ಸ್ಫೂರ್ತಿ ಪಡೆದಿರುವುದರಿಂದಲೇ ಇಷ್ಟೊಂದು ದೊಡ್ಡಮಟ್ಟದಲ್ಲಿ ಸ್ಥಿರ ಪ್ರದರ್ಶನ ನೀಡಲು ಸಾಧ್ಯವಾಯಿತು ಎಂದಿದ್ದಾರೆ.
19 ವರ್ಷದ ಟೆನ್ನಿಸ್ ಆಟಗಾರ್ತಿ ಇಗಾ ಸ್ವಿಟೆಕ್ ಫ್ರೆಂಚ್ ಓಪನ್ನಲ್ಲಿ ಅಮೆರಿಕದ ಸೋಫಿಯಾ ಕೆನನ್ ವಿರುದ್ಧ ಜಯ ಸಾಧಿಸಿದ್ದರು. ಇಲ್ಲಿಯವರೆಗೆ ನಡೆದ 14 ಗ್ರ್ಯಾಂಡ್ ಸ್ಲಾಮ್ಗಳಲ್ಲಿ ಚಾಂಪಿಯನ್ ಪಟ್ಟ ಅಲಂಕರಿಸಿದ 11ನೇ ಆಟಗಾರ್ತಿ ಎಂಬ ಹೆಗ್ಗಳಿಕೆಗೆ ಇವರು ಪಾತ್ರರಾಗಿದ್ದಾರೆ.