ನ್ಯೂಯಾರ್ಕ್:18 ನೇ ಗ್ರ್ಯಾಂಡ್ ಸ್ಲಾಮ್ ಮೇಲೆ ಕಣ್ಣಿಟ್ಟಿರುವ ಸರ್ಬಿಯಾದ ನೊವಾಕ್ ಜೋಕೊವಿಕ್ ತಮ್ಮ ಮೂರನೆ ಸುತ್ತಿನ ಪಂದ್ಯದಲ್ಲಿ ಜಾನ್ ಲೆನ್ನಾರ್ಡ್ ಸ್ಟ್ರಫ್ರನ್ನು ಮಣಿಸಿ 4 ನೇ ಸುತ್ತು ಪ್ರವೇಶಿಸಿದ್ದಾರೆ.
ಮೂರನೇ ಸುತ್ತಿನ ಪಂದ್ಯದಲ್ಲಿ ವಿಶ್ವದ ನಂಬರ್ ಒನ್ ಆಟಗಾರ 6-3,6-3,6-1ರ ನೇರ ಸೆಟ್ಗಳಲ್ಲಿ ಜರ್ಮನಿಯ ಲೆನ್ನಾರ್ಡ್ ಸ್ಟ್ರಫ್ ಮಣಿಸಿ ಫ್ರೀ ಕ್ವಾರ್ಟರ್ ಫೈನಲ್ ಪ್ರವೇಶಿಸಿದ್ದಾರೆ. ಅವರು ಮುಂದಿನ ಸುತ್ತಿನ ಪಂದ್ಯದಲ್ಲಿ ಸ್ಪೇನಿನ ಪಾಬ್ಲೊ ಕರೆನೊ ಬುಸ್ಟಾ ಅವರನ್ನು ಎದುರಿಸಲಿದ್ದಾರೆ.