ಹೈದರಾಬಾದ್: ಬ್ಯಾಡ್ಮಿಂಟನ್ ಧೃವತಾರೆಗಳಾದ ಸೈನಾ ನೆಹ್ವಾಲ್ ಹಾಗೂ ಪಾರುಪಳ್ಳಿ ಕಶ್ಯಪ್ ದಾಂಪತ್ಯ ಜೀವನಕ್ಕೆ ಕಾಲಿಟ್ಟು ಒಂದು ವರ್ಷವಾಗಿದೆ. ಅಂತೆಯೇ ಡಿಸೆಂಬರ್ 16ರಂದು ತಮ್ಮ ಮೊದಲ ವಿವಾಹ ವಾರ್ಷಿಕೋತ್ಸವನ್ನು ಈ ಜೋಡಿ ಆಚರಿಸಿಕೊಂಡಿದೆ.
ಸೈನಾ ನೆಹ್ವಾಲ್ ತಮ್ಮ ಮದುವೆಯ ವಾರ್ಷಿಕೋತ್ಸವದ ಫೋಟೋಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಳ್ಳುವ ಮೂಲಕ ಪರಸ್ಪರ ಶುಭ ಕೋರಿದ್ದಾರೆ. ಅಷ್ಟೇ ಅಲ್ಲದೆ, ಸಾಮಾಜಿಕ ಜಾಲತಾಣದಲ್ಲಿ ಅಭಿನಂದನೆಯ ಮಹಾಪೂರವೇ ಹರಿದು ಬರುತ್ತಿದೆ.