ಹೋಬರ್ಟ್:ಭಾರತದ ಖ್ಯಾತ ಟೆನ್ನಿಸ್ ಆಟಗಾರ್ತಿ ಸಾನಿಯಾ ಮಿರ್ಜಾ ಟೆನ್ನಿಸ್ ಜಗತ್ತಿಗೆ ಮರಳಿದ್ದು ಹೋಬರ್ಟ್ ಇಂಟರ್ನ್ಯಾಷನಲ್ ಟೂರ್ನಿಯಲ್ಲಿ ಕ್ವಾರ್ಟರ್ ಫೈನಲ್ ಪ್ರವೇಶಿಸುವ ಮೂಲಕ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದಾರೆ.
ಮಂಗಳವಾರ ನಡೆದ ಮಹಿಳೆಯರ ಡಬಲ್ಸ್ ವಿಭಾಗದ ಪಂದ್ಯದಲ್ಲಿ ಸಾನಿಯಾ ಉಕ್ರೇನ್ನ ನಾಡಿಯಾ ಕಿಚೆನೊಕ್ ಜೊತೆಗೂಡಿ ಜಾರ್ಜಿಯಾದ ಒಕ್ಸಾನಾ ಕಲಾಶ್ನಿಕೋವಾ ಹಾಗೂ ಜಪಾನ್ ಮಿಯು ಕಟೊ ಅವರನ್ನು 2-6, 6-6(3) ಹಾಗೂ 10-3 ರಲ್ಲಿ ಮಣಿಸಿ ಕ್ವಾರ್ಟರ್ ಫೈನಲ್ ಪ್ರವೇಶಿಸಿದ್ದಾರೆ.