ನವದೆಹಲಿ:ವಿಶ್ವ ಟೆನ್ನಿಸ್ನ 3ನೇ ಶ್ರೇಯಾಂಕದ ಆಟಗಾರ ರಾಫೆಲ್ ನಡಾಲ್ ಮುಂಬರುವ ಟೋಕಿಯೋ ಒಲಿಂಪಿಕ್ಸ್ ಮತ್ತು ವಿಂಬಲ್ಡನ್ ಚಾಂಪಿಯನ್ಶಿಪ್ನಲ್ಲಿ ಆಡದಿರಲು ನಿರ್ಧರಿಸಿರುವುದಾಗಿ ಗುರುವಾರ ಘೋಷಿಸಿದ್ದಾರೆ.
20 ಗ್ರ್ಯಾಂಡ್ಸ್ಲಾಮ್ ವಿಜೇತರಾಗಿರುವ ಸ್ಪೇನ್ ಸ್ಟಾರ್ ಜುಲೈ 23ರಿಂದ ಆಗಸ್ಟ್ 8ರವರೆಗೆ ನಡೆಯಲಿರುವ ಟೋಕಿಯೋ ಒಲಿಂಪಿಕ್ಸ್ ಮತ್ತು ಜೂನ್ 28ರಿಂದ ಜುಲೈ 11ರವರೆಗೆ ನಡೆಯಲಿರುವ ವಿಂಬಲ್ಡನ್ ಚಾಂಪಿಯನ್ಶಿಪ್ನಿಂದ ಹೊರಗುಳಿಯಲು ನಿರ್ಧರಿಸುವುದಾಗಿ 35 ವರ್ಷದ ಆಟಗಾರ ತಿಳಿಸಿದ್ದಾರೆ.
ಎಲ್ಲರಿಗೂ ನಮಸ್ಕಾರ, ಈ ವರ್ಷದ ವಿಂಬಲ್ಡನ್‌ನಲ್ಲಿ ನಡೆಯುವ ಚಾಂಪಿಯನ್‌ಶಿಪ್ ಮತ್ತು ಟೋಕಿಯೊದಲ್ಲಿ ನಡೆಯುವ ಒಲಿಂಪಿಕ್ ಕ್ರೀಡಾಕೂಟದಲ್ಲಿ ಭಾಗವಹಿಸದಿರಲು ನಾನು ನಿರ್ಧರಿಸಿದ್ದೇನೆ. ಇದು ಸುಲಭದ ನಿರ್ಧಾರವಲ್ಲ, ಆದರೆ, ನನ್ನ ದೇಹ ಸ್ಥಿತಿಯನ್ನು ಗಮನಿಸಿ ಮತ್ತು ನನ್ನ ತಂಡದೊಂದಿಗೆ ಚರ್ಚಿಸಿದ ನಂತರ ಇದೇ ಸರಿಯಾದ ನಿರ್ಧಾರ ಎಂದು ನಾನು ಅರ್ಥಮಾಡಿಕೊಂಡಿದ್ದೇನೆ ಎಂದು ಟ್ವೀಟ್ ಮೂಲಕ ತಿಳಿಸಿದ್ದಾರೆ.