ಲಂಡನ್:ಪ್ರಖ್ಯಾತ ಜಾಗತಿಕ ಟೆನ್ನಿಸ್ ತಾರೆ ಸೆರೆನಾ ವಿಲಿಯಮ್ಸ್ ಗಾಯದ ಸಮಸ್ಯೆಯಿಂದಾಗಿ ಈ ಬಾರಿಯ ವಿಂಬಲ್ಡನ್ ಪಂದ್ಯಾವಳಿಯಿಂದ ಹಿಂದೆ ಸರಿದಿದ್ದಾರೆ. ನಿನ್ನೆ ನಡೆದ ಮೊದಲ ಪಂದ್ಯದಲ್ಲಿ ಅವರ ಎಡಗಾಲಿಗೆ ಗಾಯವಾಗಿದ್ದು ಟೂರ್ನಿಯಿಂದಲೇ ಹೊರಗುಳಿದಿದ್ದಾರೆ.
23 ಗ್ರ್ಯಾಂಡ್ ಸ್ಲಾಮ್ ಪ್ರಶಸ್ತಿಗೊಡತಿಯಾಗಿರುವ ಸೆರೆನಾ ಈ ಬಾರಿ ಮತ್ತೊಂದು ಗ್ರ್ಯಾಂಡ್‌ಸ್ಲಾಮ್ ಚಾಂಪಿಯನ್ ಆಗುವ ನಿರೀಕ್ಷೆ ಇಟ್ಟುಕೊಂಡಿದ್ದರು. ಆದರೆ ಅಲಿಯಾಕ್ಸಂದ್ರ ಸಾಸ್ನೋವಿಚ್ ವಿರುದ್ಧ ನಿನ್ನೆ ನಡೆದ ಪಂದ್ಯದ ಮೊದಲ ಸೆಟ್ನಲ್ಲಿ ಗಾಯಕ್ಕೆ ತುತ್ತಾಗಿ ಅನಿವಾರ್ಯವಾಗಿ ಅವರು ಪಂದ್ಯದಿಂದ ಹೊರನಡೆಯಬೇಕಾಯಿತು.