ಟೋಕಿಯೋ(ಜಪಾನ್): ಟೋಕಿಯೊ ಪ್ಯಾರಾಲಿಂಪಿಕ್ಸ್ನ ತಾವು ಭಾಗಿಯಾಗಿದ್ದ ಮೊದಲ ಪಂದ್ಯದಲ್ಲಿ ಸೋಲು ಕಂಡಿದ್ದರೂ, ನಂತರದ ಪಂದ್ಯಗಳಲ್ಲಿ ದಿಟ್ಟ ಹೋರಾಟ ನಡೆಸಿದ ಭಾವಿನಾ ಪಟೇಲ್ ಇದೀಗ ಭಾರತಕ್ಕೆ ಮೊದಲ ಪದಕ ಖಚಿತಪಡಿಸಿದ್ದಾರೆ.
ಟೋಕಿಯೋ ಪ್ಯಾರಾಲಿಂಪಿಕ್ಸ್ನ ಮಹಿಳಾ ಟೇಬಲ್ ಟೆನಿಸ್ ಆಟಗಾರ್ತಿ ಭಾವಿನಾ ಪಟೇಲ್ ಕ್ವಾರ್ಟರ್ಫೈನಲ್ನಲ್ಲಿ ಗೆಲುವು ಸಾಧಿಸಿ, ಈಗಾಗಲೇ ಸೆಮಿಫೈನಲ್ಗೆ ಪ್ರವೇಶ ಪಡೆದುಕೊಂಡಿದ್ದಾರೆ. ಈ ಮೂಲಕ ಮೊದಲ ಪದಕ ಖಚಿತ ಪಡಿಸಿದ್ದಾರೆ. ಕ್ವಾರ್ಟರ್ಫೈನಲ್ನ ಕ್ಲಾಸ್-4 ರ ಸಿಂಗಲ್ಸ್ ವಿಭಾಗದಲ್ಲಿ ಸರ್ಬಿಯಾದ ರಾಕೋವಿಕ್ ವಿರುದ್ಧ 3-0 ಅಂತರದಿಂದ ಸೋಲಿಸಿ ಐತಿಹಾಸಿಕ ಸಾಧನೆ ನಿರ್ಮಿಸಿದ್ದಾರೆ. ಈ ಪಂದ್ಯದಲ್ಲಿ ಭಾವಿನಾ 11-5, 11-6, 11-7 ಅಂತರದಿಂದ ಗೆಲುವು ದಾಖಲು ಮಾಡಿದ್ದಾರೆ.