ನವದೆಹಲಿ:ಟೋಕಿಯೋ ಒಲಿಂಪಿಕ್ಸ್ನಲ್ಲಿ ಭಾರತದ ಪುರುಷರ ಹಾಕಿ ತಂಡ ಜರ್ಮನಿ ವಿರುದ್ಧ 5-4 ಅಂತರದಿಂದ ಗೆಲುವು ದಾಖಲು ಮಾಡುವ ಮೂಲಕ ಕಂಚಿನ ಪದಕಕ್ಕೆ ಮುತ್ತಿಕ್ಕಿದೆ. ಸುಮಾರು 41 ವರ್ಷಗಳ ಬಳಿಕ ಭಾರತಕ್ಕೆ ಹಾಕಿಯಲ್ಲಿ ಪದಕ ಸಿಕ್ಕಿದ್ದು, ಇಡೀ ದೇಶವೇ ಹೆಮ್ಮೆ ಪಡುತ್ತಿದೆ. ಇದೇ ವಿಚಾರವನ್ನಿಟ್ಟುಕೊಂಡು ಟೀಂ ಇಂಡಿಯಾ ಮಾಜಿ ಕ್ಯಾಪ್ಟನ್ ಗಂಭೀರ್ ಟ್ವೀಟ್ ಮಾಡಿದ್ದು, ಅದಕ್ಕೆ ಆಕ್ರೋಶ ವ್ಯಕ್ತವಾಗಿದೆ.
ಟೀಂ ಇಂಡಿಯಾ ಜರ್ಮನಿ ವಿರುದ್ಧ ಗೆಲುವು ದಾಖಲು ಮಾಡುತ್ತಿದ್ದಂತೆ ಟ್ವೀಟ್ ಮಾಡಿರುವ ಬಿಜೆಪಿ ಸಂಸದ ಗೌತಮ್ ಗಂಭೀರ್, 1983, 2007 ಹಾಗೂ 2011ರ ಕ್ರಿಕೆಟ್ ವಿಶ್ವಕಪ್ ಗೆಲುವುಗಳನ್ನ ಮೆರೆತು ಬಿಡಿ. ಈ ಗೆಲುವುಗಿಂತಲೂ ಹಾಕಿ ಗೆಲುವು ಮಿಗಿಲಾದದ್ದು. ಭಾರತೀಯ ಹಾಕಿ ನಮ್ಮ ಹೆಮ್ಮೆ ಎಂದು ಟ್ವೀಟ್ ಮಾಡಿದ್ದಾರೆ.