ಟೋಕಿಯೋ ಒಲಿಂಪಿಕ್ಸ್ನಲ್ಲಿ ಭಾಗಿಯಾಗಲು ಚೊಚ್ಚಲ ಅವಕಾಶ ಪಡೆದುಕೊಂಡಿದ್ದ ದೇಶದ ಫೆನ್ಸಿಂಗ್(ಕತ್ತಿವರಸೆ) ಪಟು ಭವಾನಿ ಸಿಂಗ್, 64ನೇ ಸುತ್ತಿನ ಮೊದಲ ಪಂದ್ಯದಲ್ಲಿ ಉತ್ತಮ ಪ್ರದರ್ಶನ ನೀಡಿದ್ದರು. ಆದರೆ 32ನೇ ಸುತ್ತಿನಲ್ಲಿ ಸೋಲು ಕಾಣುವ ಮೂಲಕ ನಿರಾಸೆ ಅನುಭವಿಸಿ ಟೂರ್ನಿಯಿಂದ ಹೊರಬಿದ್ದಿದ್ದಾರೆ.
ಟೋಕಿಯೋ ಒಲಿಂಪಿಕ್ಸ್ ಅನುಭವ ವಿವರಿಸಿದ ಭವಾನಿ ದೇವಿ ಈ ಸೋಲಿನ ಬಳಿಕ ಭವಾನಿ ದೇವಿ ಭಾವನಾತ್ಮಕವಾಗಿ ಟ್ವಿಟ್ ಮಾಡಿದ್ದರು. ಪಂದ್ಯದಲ್ಲಿ ಗೆಲುವು ಸಾಧಿಸಲು ಶಕ್ತಿಮೀರಿ ಪ್ರಯತ್ನಿಸಿದ್ದೇನೆ, ಆದರೆ ಯಶಸ್ವಿಯಾಗಲಿಲ್ಲ. ಇದಕ್ಕಾಗಿ ಕ್ಷಮೆಯಿರಲಿ ಎಂದಿದ್ದರು. ಈ ವೇಳೆ ಪ್ರಧಾನಿ ಮೋದಿ ಇವರಿಗೆ ಧೈರ್ಯ ತುಂಬುವ ಕೆಲಸ ಮಾಡಿದ್ದರು.
ಇದೀಗ ಸುದ್ದಿಗಾರರೊಂದಿಗೆ ತಮ್ಮ ಅನುಭವ ಹಂಚಿಕೊಂಡಿರುವ ಅವರು, ಒಲಿಂಪಿಕ್ಸ್ನಲ್ಲಿ ಭಾಗಿಯಾಗಲು ಅರ್ಹತೆ ಗಿಟ್ಟಿಸಿಕೊಳ್ಳಲು ಕಷ್ಟಪಟ್ಟಿದ್ದೇನೆ. ಒಲಿಂಪಿಕ್ಸ್ನಿಂದ ಬಹಳಷ್ಟು ಕಲಿತುಕೊಂಡಿದ್ದೇನೆ. ಮುಂಬರುವ ಪಂದ್ಯಾವಳಿಗಳಲ್ಲಿ ಉತ್ತಮ ಪ್ರದರ್ಶನ ನೀಡಲು ಖಂಡಿತವಾಗಿ ಮತ್ತಷ್ಟು ಶ್ರಮಿಸುತ್ತೇನೆ ಎಂದು ಹೇಳಿದರು.
ವೈಫಲ್ಯಗಳಿಂದ ಸಾಕಷ್ಟು ಕಲಿತಿದ್ದೇನೆ. ಒಲಿಂಪಿಕ್ಸ್ನಲ್ಲಿ ನೀಡಿರುವ ಪ್ರದರ್ಶನದಿಂದ ತೃಪ್ತಿ ಇದೆ. ಆದರೆ ಒಲಿಂಪಿಕ್ಸ್ನಲ್ಲಿ ಭಾಗಿಯಾಗುವುದು ಅಷ್ಟೊಂದು ಸುಲಭವಲ್ಲ ಎಂದು ಭವಾನಿ ದೇವಿ ತಿಳಿಸಿದ್ದಾರೆ. ಎರಡನೇ ಸುತ್ತಿನಲ್ಲಿ ಸ್ವಲ್ಪ ನಿರಾಶೆಗೊಂಡಿದ್ದೆ. ಆದರೆ ಭಾರತಕ್ಕಾಗಿ ಯಾವಾಗಲೂ ಪದಕ ಗೆಲ್ಲಬೇಕು ಎಂಬುದು ನನ್ನ ಬಯಕೆ. ಇದು ಒಲಿಂಪಿಕ್ಸ್ನಿಂದ ಮಾತ್ರವಲ್ಲ, ಬೇರೆ ಕಡೆ ನಡೆಯುವ ಸ್ಪರ್ಧೆಗಳಿಂದಲೂ ಪದಕ ಗೆಲ್ಲುವ ಇರಾದೆ ಇದೆ ಎಂದಿದ್ದಾರೆ.
ಇದನ್ನೂ ಓದಿ: ಕೃನಾಲ್ ಪಾಂಡ್ಯಾಗೆ ಕೊರೊನಾ: ಭಾರತ-ಲಂಕಾ 2ನೇ ಟಿ-20 ಪಂದ್ಯ ನಾಳೆಗೆ ಮುಂದೂಡಿಕೆ