ಟೋಕಿಯೋ(ಜಪಾನ್):ಭಾರತೀಯ ಪ್ಯಾರಾ ಟೇಬಲ್ ಟೆನ್ನಿಸ್ ಆಟಗಾರ್ತಿ ಭಾವಿನಾ ಪಟೇಲ್ ಮಹಿಳಾ ಟೇಬಲ್ ಟೆನ್ನಿಸ್ ಸಿಂಗಲ್ಸ್ನಲ್ಲಿ ದೇಶಕ್ಕೆ ಬೆಳ್ಳಿ ಪದಕ ತಂದುಕೊಟ್ಟಿದ್ದಾರೆ.
ಪ್ಯಾರಾಲಿಂಪಿಕ್ಸ್‌ನಲ್ಲಿ ಭಾರತಕ್ಕೆ ಮೊದಲ ಪದಕ; ಟೇಬಲ್ ಟೆನ್ನಿಸ್‌ನಲ್ಲಿ ಬೆಳ್ಳಿ ಗೆದ್ದು ಭಾವಿನಾ ಪಟೇಲ್ ದಾಖಲೆ - ಮಹಿಳಾ ಸಿಂಗಲ್ಸ್ ಕ್ಲಾಸ್ 4 ಸ್ಪರ್ಧೆ
ಮಹಿಳಾ ಸಿಂಗಲ್ಸ್ ಕ್ಲಾಸ್ 4 ವಿಭಾಗದ ಫೈನಲ್‌ನಲ್ಲಿ ಚೀನಾದ ಜೋ ಯಿಂಗ್ ವಿರುದ್ಧ ಪರಾಭವಗೊಂಡಿರುವ ಪ್ಯಾರಾ ಟೇಬಲ್ ಟೆನ್ನಿಸ್ ಆಟಗಾರ್ತಿ ಭಾವಿನಾ ಪಟೇಲ್ ಬೆಳ್ಳಿ ಪದಕಕ್ಕೆ ಕೊರಳೊಡ್ಡಿದ್ದಾರೆ.
ಮಹಿಳಾ ಸಿಂಗಲ್ಸ್ ಕ್ಲಾಸ್ 4 ಸ್ಪರ್ಧೆ
ಮಹಿಳಾ ಸಿಂಗಲ್ಸ್‌ನ ಕ್ಲಾಸ್-4 ಸ್ಪರ್ಧೆಯ ಫೈನಲ್‌ನಲ್ಲಿ ಚೀನಾದ ಜೋ ಯಿಂಗ್ ವಿರುದ್ಧ ಸೋತ ಭಾವಿನಾ ಬೆಳ್ಳಿ ಪದಕಕ್ಕೆ ತೃಪ್ತಿಪಟ್ಟುಕೊಂಡಿದ್ದಾರೆ. ಜೋ ಯಿಂಗ್ ವಿರುದ್ಧ ವಿರುದ್ಧ 11-7, 11-5, 11-6 ವಿರುದ್ಧ ಸೋಲುಂಡರು.
ತಮ್ಮ 12 ನೇ ವಯಸ್ಸಿನಲ್ಲಿ ಪೋಲಿಯೊಗೆ ತುತ್ತಾದ 34 ರ ಹರೆಯದ ಭಾವಿನಾ, ಟೋಕಿಯೊದ ಪ್ಯಾರಾಲಿಂಪಿಕ್ಸ್ ಪ್ಯಾರಾ ಟೇಬಲ್ ಟೆನ್ನಿಸ್‌ನಲ್ಲಿ ಪದಕ ಗೆದ್ದಿರುವುದು ಖುಷಿ ತಂದಿದೆ ಎಂದು ಹೇಳಿದ್ದಾರೆ.