ಕರ್ನಾಟಕ

karnataka

ETV Bharat / sports

ವೈದ್ಯಕೀಯ ಚಿಕಿತ್ಸೆಗಾಗಿ ಪಿಎಂ ಅಮೆರಿಕಕ್ಕೆ ಕಳುಹಿಸಿದ್ದು ನಿಜ, ತರಬೇತಿ ವೇಳೆ ಸಾಕಷ್ಟು ಸಹಾಯ: ಮೀರಾಬಾಯಿ ಚನು! - ಪ್ರಧಾನಿ ಮೋದಿ ಚನುಗೆ ಸಹಾಯ

ಟೋಕಿಯೋ ಒಲಿಂಪಿಕ್ಸ್​ನಲ್ಲಿ ಭಾಗಿಯಾಗುವುದಕ್ಕೂ ಮುಂಚಿತವಾಗಿ ಪ್ರಧಾನಿ ನರೇಂದ್ರ ಮೋದಿ ತಮಗೆ ಹೆಚ್ಚಿನ ಸಹಾಯ ಮಾಡಿದ್ದಾರೆ ಎಂದು ಮೀರಾಬಾಯಿ ಚನು ಹೇಳಿಕೊಂಡಿದ್ದಾರೆ.

Mirabai Chanu
Mirabai Chanu

By

Published : Aug 6, 2021, 3:53 PM IST

ಇಂಪಾಲ್(ಮಣಿಪುರ)​: ಟೋಕಿಯೋ ಒಲಿಂಪಿಕ್ಸ್​​​ನಲ್ಲಿ ವೇಟ್​ ಲಿಫ್ಟರ್​ ಮೀರಾಬಾಯಿ ಚನು ಬೆಳ್ಳಿ ಪದಕ ಗೆಲ್ಲುವ ಮೂಲಕ ಕೋಟ್ಯಂತರ ಅಭಿಮಾನಿಗಳ ಮನ ಗೆದ್ದಿದ್ದಾರೆ. ಆದರೆ, ಈ ಹಿಂದೆ ಬೆನ್ನು ನೋವಿಗೊಳಗಾಗಿದ್ದ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ತಮಗೆ ಸಹಾಯ ಮಾಡಿದ್ದರೂ ಎಂಬ ವಿಷಯ ಬಹಿರಂಗಗೊಳಿಸಿದ್ದಾರೆ.

ಬೆಳ್ಳಿ ಪದಕ ವಿಜೇತೆ ಮೀರಾಬಾಯಿ ಚುನು

ಇದೇ ವಿಷಯವಾಗಿ ಮಾತನಾಡಿದ್ದ ಮಣಿಪುರ ಮುಖ್ಯಮಂತ್ರಿ ಎನ್​. ಬಿರೇನ್​ ಸಿಂಗ್​, ಮೀರಾಬಾಯಿ ಚನುಗೆ ಪ್ರಧಾನಿ ನರೇಂದ್ರ ಮೋದಿ ಸಾಕಷ್ಟು ಸಹಾಯ ಮಾಡಿದ್ದಾರೆ. ಅಮೆರಿಕದಲ್ಲಿ ವೈದ್ಯಕೀಯ ಚಿಕಿತ್ಸೆ ಹಾಗೂ ತರಬೇತಿ ಪಡೆದುಕೊಳ್ಳಲು ನೆರವಾಗಿದ್ದರು ಎಂದು ಹೇಳಿದ್ದರು. ಒಂದು ವೇಳೆ ಮೀರಾಬಾಯಿ ಚನು ಅಮೆರಿಕಕ್ಕೆ ಹೋಗಿ ವೈದ್ಯಕೀಯ ಚಿಕಿತ್ಸೆ ಹಾಗೂ ತರಬೇತಿ ಪಡೆದುಕೊಳ್ಳದಿದ್ದರೆ ಒಲಿಂಪಿಕ್ಸ್​​ನಲ್ಲಿ ಇಂತಹ ಸಾಧನೆ ಮಾಡಲು ಸಾಧ್ಯವಾಗುತ್ತಿರಲಿಲ್ಲ ಎಂದು ತಿಳಿಸಿದ್ದರು.

ಇದೇ ವಿಚಾರಕ್ಕೆ ಸಂಬಂಧಿಸಿದಂತೆ ಖುದ್ದಾಗಿ ಮಾತನಾಡಿರುವ ಬೆಳ್ಳಿ ಪದಕ ವಿಜೇತೆ ಮೀರಾಬಾಯಿ ಚನು, ಟೋಕಿಯೋ ಒಲಿಂಪಿಕ್ಸ್​ನಲ್ಲಿ ಭಾಗಿಯಾಗಲು ಪ್ರಧಾನಿ ನರೇಂದ್ರ ಮೋದಿ ನನಗೆ ತುಂಬಾ ಸಹಾಯ ಮಾಡಿದ್ದಾರೆ. ಗಾಯಗೊಂಡಿದ್ದ ಸಂದರ್ಭದಲ್ಲಿ ಅಮೆರಿಕಕ್ಕೆ ತೆರಳಲು ವಿಮಾನ ಟಿಕೆಟ್​ ವ್ಯವಸ್ಥೆ ಹಾಗೂ ವೈದ್ಯಕೀಯ ಚಿಕಿತ್ಸೆಯ ಸಂಪೂರ್ಣ ಜವಾಬ್ದಾರಿ ಹೊತ್ತುಕೊಂಡಿದ್ದರು. ತರಬೇತಿ ಸಂದರ್ಭದಲ್ಲೂ ಅವರು ಸಾಕಷ್ಟು ಬೆಂಬಲ ನೀಡಿದ್ದಾರೆ ಎಂದು ಚನು ಹೇಳಿಕೊಂಡಿದ್ದಾರೆ.

ಇದನ್ನೂ ಓದಿರಿ: ಸೆಮೀಸ್​ನಲ್ಲಿ ಸೋತ ಬಜರಂಗ್​ ಪೂನಿಯಾ.. ಕಂಚಿನ ಪದಕಕ್ಕಾಗಿ ಮುಂದಿನ ಪಂದ್ಯದಲ್ಲಿ ಫೈಟ್​​

ಮೀರಾ ಬಾಯಿ ಚನುಗೆ ಬೆನ್ನು ನೋವು ಕಾಣಿಸಿಕೊಂಡಿತ್ತು. ಇದರ ಬಗ್ಗೆ ಮಾಹಿತಿ ಗೊತ್ತಾಗುತ್ತಿದ್ದಂತೆ ಪ್ರಧಾನಿ ನರೇಂದ್ರ ಮೋದಿ ಖುದ್ದಾಗಿ ಮಧ್ಯಪ್ರವೇಶ ಮಾಡಿ ಎಲ್ಲ ರೀತಿಯ ಸೌಲಭ್ಯ ಒದಗಿಸಿದ್ದರು. ಅದರ ಫಲವಾಗಿ ಚನು ಈ ಸಲದ ಟೋಕಿಯೋ ಒಲಿಂಪಿಕ್ಸ್​ನಲ್ಲಿ ಬೆಳ್ಳಿ ಪದಕ ಗೆಲ್ಲುವಲ್ಲಿ ಯಶಸ್ವಿಯಾಗಿದ್ದಾರೆ.

ABOUT THE AUTHOR

...view details