ನವದೆಹಲಿ: ಟೋಕಿಯೋ ಒಲಿಂಪಿಕ್ಸ್‌ಗೆ ಅಧಿಕೃತ ಚಾಲನೆ ಸಿಕ್ಕಿದೆ. ಭಾರತದಿಂದಲೂ 120ಕ್ಕೂ ಅಧಿಕ ಅಥ್ಲೀಟ್ಸ್ ಈ ಕ್ರೀಡಾಕೂಟದಲ್ಲಿ ಭಾಗಿಯಾಗಿದ್ದಾರೆ. ಉದ್ಘಾಟನಾ ಸಮಾರಂಭದಲ್ಲಿ ಭಾರತದ ತ್ರಿವರ್ಣ ಧ್ವಜ ಹಿಡಿದುಕೊಂಡು ಬಾಕ್ಸಿಂಗ್ ಚಾಂಪಿಯನ್ ತಾರೆ ಮೇರಿ ಕೋಮ್ ಹಾಗೂ ಹಾಕಿ ತಂಡದ ನಾಯಕ ಮನ್ಪ್ರೀತ್ ಸಿಂಗ್ ಕಾರ್ಯಕ್ರಮದಲ್ಲಿ ಪಾಲ್ಗೊಂಡರು.
ಟೋಕಿಯೋ ಒಲಿಂಪಿಕ್ಸ್ನಲ್ಲಿ ಭಾರತ ತಂಡ: ಎದ್ದು ನಿಂತು ಚಪ್ಪಾಳೆ ತಟ್ಟಿ ಬೆಂಬಲಿಸಿದ ಮೋದಿ - ಟೋಕಿಯೋ ಒಲಿಂಪಿಕ್ಸ್ನಲ್ಲಿ ಭಾರತ ತಂಡ
ಬಹುನಿರೀಕ್ಷಿತ ಜಪಾನ್ನ ಟೋಕಿಯೋ ಒಲಿಂಪಿಕ್ಸ್‌ಗೆ ಅಧಿಕೃತ ಚಾಲನೆ ದೊರೆತಿದೆ. ಭಾರತೀಯ ಕ್ರೀಡಾಪಟುಗಳ ತಂಡ ಉದ್ಘಾಟನಾ ಸಮಾರಂಭದಲ್ಲಿ ದೇಶದ ಧ್ವಜ ಹಿಡಿದು ಹೆಜ್ಜೆ ಹಾಕುತ್ತಿದ್ದಂತೆ ಇತ್ತ ದೆಹಲಿಯಲ್ಲಿ ಕಾರ್ಯಕ್ರಮದ ನೇರಪ್ರಸಾರ ವೀಕ್ಷಿಸುತ್ತಿದ್ದ ಪ್ರಧಾನಿ ನರೇಂದ್ರ ಮೋದಿ ಎದ್ದುನಿಂತು ಚಪ್ಪಾಳೆ ತಟ್ಟುತ್ತಾ ಬೆಂಬಲ ವ್ಯಕ್ತಪಡಿಸಿದರು.
PM Modi
ಕೇಂದ್ರ ಕ್ರೀಡಾ ಸಚಿವ ಅನುರಾಗ್ ಠಾಕೂರ್, ರಾಜ್ಯ ಖಾತೆ ಸಚಿವ ನಿಸಿತ್ ಪ್ರಮಣಿಕ್, ಒಲಿಂಪಿಕ್ಸ್ ಪದಕ ವಿಜೇತೆ ಕರ್ಣಂ ಮಲೇಶ್ವರಿ ಭಾರತದ ಅಥ್ಲೀಟ್ಸ್ಗಳನ್ನೂ ಹುರಿದುಂಬಿಸಿದ್ದಾರೆ. ಕೊರೊನಾ ವೈರಸ್ ಕಾರಣ ಕೇವಲ 30 ಅಥ್ಲಿಟ್ಸ್ ಮಾತ್ರ ಉದ್ಘಾಟನಾ ಸಮಾರಂಭದಲ್ಲಿ ಭಾಗಿಯಾಗಲು ಅವಕಾಶವಿತ್ತು.
ಇದನ್ನೂ ಓದಿ: ಟೋಕಿಯೋ ಒಲಿಂಪಿಕ್ಸ್‌ಗೆ ಅಧಿಕೃತ ಚಾಲನೆ: ಭಾರತ ಮುನ್ನಡೆಸಿದ ಮೇರಿ ಕೋಮ್- ಮನ್ಪ್ರೀತ್