ನವದಹಲಿ:ಜಪಾನ್ನಟೋಕಿಯೋ ಒಲಿಂಪಿಕ್ಸ್ನಲ್ಲಿ ಭಾಗಿಯಾಗಿ ಭಾರತಕ್ಕೆ ಕಂಚಿನ ಪದಕ ಗೆದ್ದುಕೊಡುವಲ್ಲಿ ಯಶಸ್ವಿಯಾಗಿರುವ ಬ್ಯಾಡ್ಮಿಂಟನ್ ತಾರೆ ಪಿ.ವಿ. ಸಿಂಧು ಭಾರತಕ್ಕೆ ಆಗಮಿಸಿದ್ದಾರೆ. ದೆಹಲಿಯ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿಯುತ್ತಿದ್ದಂತೆ ಅದ್ಧೂರಿಯಾಗಿ ಸ್ವಾಗತ ಮಾಡಿಕೊಳ್ಳಲಾಯಿತು.
ಭಾರತಕ್ಕೆ ಬಂದ ಕಂಚಿನ ಪದಕ ವಿಜೇತೆ ಸಿಂಧು ಬ್ಯಾಡ್ಮಿಂಟನ್ ಸಿಂಗಲ್ಸ್ನಲ್ಲಿ ಸೆಮಿಫೈನಲ್ಗೆ ಲಗ್ಗೆ ಹಾಕಿದ್ದ ಸಿಂಧು, ತೈ ಜು ಯಿಂಗ್ ವಿರುದ್ಧ ಸೋಲು ಕಂಡಿದ್ದರು. ಇದಾದ ಬಳಿಕ ಕಂಚಿನ ಪದಕಕ್ಕಾಗಿ ನಡೆದ ಪಂದ್ಯದಲ್ಲಿ ಚೀನಾದ ಆಟಗಾರ್ತಿ ಹೀ ಬಿಂಗ್ ಜಿಯಾವೊ ವಿರುದ್ಧ ಗೆಲುವು ಸಾಧಿಸಿ ಪದಕಕ್ಕೆ ಮುತ್ತಿಕ್ಕಿದ್ದಾರೆ. ಅವರು ಭಾರತಕ್ಕೆ ಬರುತ್ತಿದ್ದಂತೆ ಅದ್ಧೂರಿಯಾಗಿ ವೆಲ್ಕಮ್ ಮಾಡಿಕೊಳ್ಳಲಾಗಿದೆ.
ಈ ವೇಳೆ ಮಾತನಾಡಿರುವ ಸಿಂಧು, ನಾನು ತುಂಬಾ ಸಂತೋಷಗೊಂಡಿದ್ದೇನೆ. ನನಗೆ ಸಹಕರಿಸಿ, ಬೆಂಬಲಿಸಿರುವ ಪ್ರತಿಯೊಬ್ಬರಿಗೂ ಧನ್ಯವಾದಗಳು. ಸಪೋರ್ಟ್ ಮಾಡಿರುವ ಬ್ಯಾಡ್ಮಿಂಟನ್ ಅಸೋಷಿಯೇಷನ್ಗೂ ಥ್ಯಾಂಕ್ಸ್. ಇದು ನನಗೆ ಸಂತೋಷದ ಸಮಯ ಎಂದು ಸಿಂಧು ಹೇಳಿದ್ದಾರೆ.
ಇದನ್ನೂ ಓದಿರಿ: ಪಿ ವಿ ಸಿಂಧು ಸಿಂಧು, ಪಿಎಂ ಮೋದಿಗೆ ಮಂಗಳೂರು ಪಬ್ಬಾಸ್ನಿಂದ ಐಸ್ ಕ್ರೀಂ ಆಫರ್
2016ರಲ್ಲಿ ನಡೆದ ರಿಯೋ ಒಲಿಂಪಿಕ್ಸ್ನಲ್ಲಿ ಸಿಂಧು ಬೆಳ್ಳಿ ಪದಕ ಜಯಿಸಿ ಸಾಧನೆ ಮಾಡಿದ್ದರು. ಈ ಬಾರಿ ಅವರು ಕಂಚಿನ ಪದಕಕ್ಕೆ ಮುತ್ತಿಕ್ಕುವ ಮೂಲಕ ಬ್ಯಾಡ್ಮಿಂಟನ್ ವಿಭಾಗದಲ್ಲಿ ಒಲಿಂಪಿಕ್ಸ್ನಲ್ಲಿ ಸತತವಾಗಿ ಎರಡು ಬಾರಿ ಪದಕ ಗೆದ್ದಿರುವ ಮೊದಲ ಭಾರತೀಯ ಮಹಿಳಾ ಪಟು ಎಂಬ ಹೆಗ್ಗಳಿಕೆಗೆ ಸಿಂಧು ಪಾತ್ರರಾಗಿದ್ದಾರೆ.