ಟೋಕಿಯೊ: ಇಂದು ನಡೆದ ಟೋಕಿಯೋ ಒಲಿಂಪಿಕ್ಸ್ನಲ್ಲಿ ಭಾರತದ ರೋವರ್ಸ್ ತಂಡವು ಉತ್ತಮ ಪ್ರದರ್ಶನ ನೀಡಿದ್ದು, ಸೆಮಿಫೈನಲ್ಗೆ ಅರ್ಹತೆ ಗಿಟ್ಟಿಸಿಕೊಂಡಿದ್ದಾರೆ. ಅರ್ಜುನ್ ಲಾಲ್ ಜಾಟ್ ಮತ್ತು ಅರವಿಂದ್ ಸಿಂಗ್ ಜೋಡಿ ಅತ್ಯುತ್ತಮ ಪ್ರದರ್ಶನ ನೀಡಿ ಮೂರನೇ ಸ್ಥಾನದಲ್ಲಿದೆ.
6: 43.44 ರ ಸಮಯದಲ್ಲಿ ಪೋಲೆಂಡ್ನ ಜೆರ್ಜಿ ಕೋವಾಲ್ಕ್ಸಿ ಮತ್ತು ಆರ್ತೂರ್ ಮಿಕೊಲಾಜ್ವೆಸ್ಕಿ ಮೊದಲನೇ ಸ್ಥಾನ ಪಡೆದಿದ್ದಾರೆ. ಭಾರತೀಯ ಜೋಡಿ 6:51:36 ಸಮಯದಲ್ಲಿ ಉತ್ತಮ ಪ್ರದರ್ಶನ ನೀಡಿ ಮೂರನೇ ಸ್ಥಾನದಲ್ಲಿದೆ.