ಟೋಕಿಯೋ: ಒಲಿಂಪಿಕ್ಸ್ನಲ್ಲಿ ನಡೆದ 100 ಮೀಟರ್ ಬಟರ್‌ಫ್ಲೈ ಸ್ಪರ್ಧೆಯಲ್ಲಿ ಭಾರತೀಯ ಅಥ್ಲೀಟ್ ಸಜನ್ ಪ್ರಕಾಶ್ ಸೆಮಿಫೈನಲ್ಗೆ ಅರ್ಹತೆ ಗಿಟ್ಟಿಸಿಕೊಳ್ಳುವಲ್ಲಿ ವಿಫಲರಾದರು.
100 ಮೀಟರ್ ಬಟರ್‌ಫ್ಲೈ ಸ್ಪರ್ಧೆಯಲ್ಲಿ ಸಜನ್ 53:45 ಸೆಕೆಂಡ್ಗಳಲ್ಲಿ ಗುರಿ ಮುಟ್ಟಿದ್ದು, ಕೇವಲ 6 ಸೆಕೆಂಡುತಡವಾಗಿರುವ ಕಾರಣ ಸೆಮಿಫೈನಲ್ಗೆ ಅರ್ಹತೆ ಗಿಟ್ಟಿಸಿಕೊಳ್ಳುವುದು ಸಾಧ್ಯವಾಗಲಿಲ್ಲ. ಈ ಸ್ಪರ್ಧೆಯಲ್ಲಿ ಅವರು 46ನೇ ಸ್ಥಾನದೊಂದಿಗೆ ಹೋರಾಟ ಅಂತ್ಯಗೊಳಿಸಿದ್ದಾರೆ.
ಇದನ್ನೂ ಓದಿ: ಕಣ್ಣಲ್ಲಿ ನೀರು ತುಂಬಿ ಮುಗುಳು ನಗೆ: ಪರಾಜಯದೊಂದಿಗೆ ಒಲಿಂಪಿಕ್ಸ್ ಮುಗಿಸಿದ ಸ್ಟಾರ್ ಬಾಕ್ಸರ್
200 ಮೀಟರ್ ಬಟರ್‌ಫ್ಲೈ ಸ್ಪರ್ಧೆಯಲ್ಲೂ ಭಾಗಿಯಾಗಿದ್ದ ಸಜನ್ ಪ್ರಕಾಶ್ 57.22 ಸೆಕೆಂಡ್ಗಳಲ್ಲಿ ಗುರಿ ಮುಟ್ಟಿ 4ನೇ ಸ್ಥಾನಕ್ಕೆ ತೃಪ್ತಿ ಪಟ್ಟುಕೊಂಡಿದ್ದರು. ಇದಕ್ಕೂ ಮೊದಲು ಭಾರತದ ಭರವಸೆ ಬಾಕ್ಸರ್ ಮೇರಿ ಕೋಮ್ ಕೂಡ 16ನೇ ಸುತ್ತಿನ ಫ್ರೀ ಕ್ವಾರ್ಟರ್ ಪಂದ್ಯದಲ್ಲಿ ಎದುರಾಳಿ ವಿರುದ್ಧ 2-3 ಅಂತರದಿಂದ ಸೋಲು ಕಾಣುವ ಮೂಲಕ ಒಲಿಂಪಿಕ್ಸ್ನಿಂದ ಹೊರಬಿದ್ದಿದ್ದಾರೆ.