ಜಪಾನ್:ಟೋಕಿಯೋದಲ್ಲಿ ನಡೆಯುತ್ತಿರುವ ಪ್ಯಾರಾಲಿಂಪಿಕ್ಸ್ ಭಾರತದ ಪದಕಗಳ ಬೇಟೆ ಮುಂದುವರಿದಿದ್ದು, ಮಹಿಳಾ ವಿಭಾಗದ 10 ಮೀಟರ್ ಏರ್ ರೈಫಲ್‌ನಲ್ಲಿ ಅವನಿ ಲೇಖಾರಾ ಚಿನ್ನದ ಪದಕ ಗೆಲ್ಲುವ ಮೂಲಕ ಇತಿಹಾಸ ನಿರ್ಮಿಸಿದ್ದಾರೆ.
ಪ್ಯಾರಾಲಿಂಪಿಕ್ಸ್: 10 ಮೀಟರ್ ಏರ್ ರೈಫಲ್ ಶೂಟಿಂಗ್‌ನಲ್ಲಿ ಚಿನ್ನದ ಪದಕಕ್ಕೆ ಮುತ್ತಿಟ್ಟ ಅವನಿ
ಪ್ಯಾರಾಲಿಂಪಿಂಕ್ಸ್‌ನಲ್ಲಿ ಭಾರತಕ್ಕೆ ಮತ್ತೊಂದು ಚಿನ್ನದ ಪದಕ ಬಂದಿದ್ದು, ಮಹಿಳಾ ವಿಭಾಗದ 10 ಮೀಟರ್ ಸ್ಟಾಂಡಿಂಗ್ ಏರ್ ರೈಫಲ್‌ನಲ್ಲಿ ಅವನಿ ಲೇಖಾರಾ ಚಿನ್ನದ ಪದಕ ಮುಡಿಗೇರಿಸಿಕೊಂಡಿದ್ದಾರೆ. ಪ್ರಧಾನಿ ಮೋದಿ ಅವಾನಿ ಅವರ ಸಾಧನೆಯನ್ನು ಶ್ಲಾಘಿಸಿದ್ದಾರೆ.
ಪ್ಯಾರಾಲಿಂಪಿಕ್ಸ್: 10 ಮೀಟರ್ ಏರ್ ರೈಫಲ್ ಶೂಟಿಂಗ್‌ನಲ್ಲಿ ಚಿನ್ನದ ಪದಕಕ್ಕೆ ಮುತ್ತಿಟ್ಟ ಅವಾನಿ
ಅವನಿ ಅವರ ಸಾಧನೆಯನ್ನು ಕೊಂಡಾಡಿರುವ ಪ್ರಧಾನಿ ನರೇಂದ್ರ ಮೋದಿ. ಅಸಾಧಾರಣ ಸಾಧನೆ ಎಂದು ಟ್ವೀಟ್ ಮಾಡಿದ್ದಾರೆ. ಪ್ಯಾರಾ ಒಲಿಂಪಿಕ್ಸ್‌ನಲ್ಲಿ ಭಾರತಕ್ಕೆ ಮತ್ತೊಂದು ಚಿನ್ನದ ಪದಕ ತಂದುಕೊಟ್ಟ ನಿಮಗೆ ಅಭಿನಂದನೆಗಳು. ಚಿನ್ನದ ಪದಕಕ್ಕೆ ನೀವು ಅರ್ಹರಾಗಿದ್ದೀರಿ. ಭಾರತದ ಕ್ರೀಡೆಗೆ ನಿಜವಾಗಿಯೂ ಇದೊಂದು ವಿಶೇಷವಾದ ಗಳಿಗೆಯಾಗಿದೆ ಎಂದಿದ್ದಾರೆ.
ಪ್ಯಾರಾಲಿಂಪಿಕ್ಸ್ ಏರ್ ರೈಫಲ್‌ನಲ್ಲಿ ಚಿನ್ನ ಗೆದ್ದ ಮೊದಲ ಆಟಗಾರ್ತಿ ಎಂಬ ಹೆಗ್ಗಳಿಕೆಗೂ ಅವನಿ ಭಾಜನರಾಗಿದ್ದಾರೆ.
Last Updated : Aug 30, 2021, 5:22 PM IST