ಹರಿದ್ವಾರ(ಉತ್ತರಾಖಂಡ):ಟೋಕಿಯೋ ಒಲಿಂಪಿಕ್ಸ್ನಲ್ಲಿ ಭಾರತದ ಮಹಿಳಾ ತಂಡ ಪದಕ ಗೆಲ್ಲುವಲ್ಲಿ ವಿಫಲವಾಗಿದ್ದರೂ ಅದ್ಭುತ ಪ್ರದರ್ಶನದ ಮೂಲಕ ಸೆಮಿಫೈನಲ್ಗೆ ಲಗ್ಗೆ ಹಾಕುವಲ್ಲಿ ಯಶಸ್ವಿಯಾಗಿತ್ತು. ಇವರ ಪ್ರದರ್ಶನಕ್ಕೆ ಎಲ್ಲೆಡೆಯಿಂದ ಮೆಚ್ಚುಗೆ ವ್ಯಕ್ತವಾಗಿದ್ದು, ಪ್ರಧಾನಿ ಮೋದಿ ಕೂಡ ಶಹಬ್ಬಾಸ್ಗಿರಿ ನೀಡಿದ್ದಾರೆ.
ಭಾರತಕ್ಕೆ ಬಂದಿರುವ ಮಹಿಳಾ ತಂಡಕ್ಕೂ ಈಗಾಗಲೇ ಅದ್ಧೂರಿ ಸ್ವಾಗತ ಸಿಕ್ಕಿದ್ದು, ಸದ್ಯ ಆಟಗಾರ್ತಿಯರು ತಮ್ಮ ತಮ್ಮ ತವರು ರಾಜ್ಯಕ್ಕೆ ಪ್ರಯಾಣ ಬೆಳೆಸಿದ್ದಾರೆ. ತಂಡದ ಆಟಗಾರ್ತಿ ವಂದನಾ ಕಟಾರಿಯಾ ಕೂಡ ಉತ್ತರಾಖಂಡ್ನ ಹರಿದ್ವಾರ್ಕ್ಕೆ ತೆರಳಿದ್ದು, ಅಲ್ಲಿ ಅದ್ಧೂರಿ ಸ್ವಾಗತ ಸಿಕ್ಕಿದೆ. ಈ ವೇಳೆ ಹೆತ್ತಮ್ಮನ ನೋಡುತ್ತಿದ್ದಂತೆ ತಬ್ಬಿಕೊಂಡು ಕಣ್ಣೀರು ಹಾಕಿದ್ದಾರೆ. ಟೋಕಿಯೋ ಒಲಿಂಪಿಕ್ಸ್ನಲ್ಲಿ ವಂದನಾ ಹ್ಯಾಟ್ರಿಕ್ ಗೋಲು ಸಿಡಿಸಿ, ತಂಡದ ಗೆಲುವಿನಲ್ಲಿ ಮಹತ್ವದ ಪಾತ್ರ ನಿರ್ವಹಿಸಿದ್ದರು.