ಕರ್ನಾಟಕ

karnataka

ETV Bharat / state

ಬಾಗಲಕೋಟೆಯಲ್ಲಿ 10 ವಿದ್ಯಾರ್ಥಿಗಳಿಗೆ ಕೊರೊನಾ ಸೋಂಕು ದೃಢ - ವಿದ್ಯಾರ್ಥಿಗಳಿಗೆ ಕೊರೊನಾ ಸೋಂಕು

ಬಾಗಲಕೋಟೆ ಜಿಲ್ಲೆಯಲ್ಲಿ ಮತ್ತೆ ಕೊರೊನಾ ಸೋಂಕು ಕಾಣಿಸಿಕೊಂಡಿದ್ದು, ಪದವಿ ಕಾಲೇಜುಗಳ ಪ್ರಾರಂಭಗೊಂಡ ಬೆನ್ನಲ್ಲೇ, ವಿವಿಧ ಕಾಲೇಜಿನ 10 ವಿದ್ಯಾರ್ಥಿಗಳಿಗೆ ಕೊರೊನಾ ಪಾಸಿಟಿವ್​ ಇರುವುದು ದೃಢಪಟ್ಟಿದೆ.

File photo
ಸಂಗ್ರಹ ಚಿತ್ರ

By

Published : Nov 20, 2020, 10:28 AM IST

Updated : Nov 20, 2020, 10:53 AM IST

ಬಾಗಲಕೋಟೆ:ಪದವಿ ಕಾಲೇಜುಗಳು ಆರಂಭಗೊಂಡ ಬೆನ್ನಲ್ಲೇ ಜಿಲ್ಲೆಯಲ್ಲಿನ ಒಟ್ಟು 10 ವಿದ್ಯಾರ್ಥಿಗಳು ಕೊರೊನಾ ಸೋಂಕಿಗೆ ಒಳಗಾಗಿದ್ದು, ಇನ್ನಿತರ ವಿದ್ಯಾರ್ಥಿಗಳು ಹಾಗೂ ಪಾಲಕರಿಗೂ ಆತಂಕವನ್ನುಂಟುಮಾಡಿದೆ.

ಕೊರೊನಾ ಪರೀಕ್ಷೆ ಮಾಡಿಸಿಕೊಳ್ಳುತ್ತಿರುವ ವಿದ್ಯಾರ್ಥಿಗಳು

ಎಂಟು ತಿಂಗಳ ಬಳಿಕ ಪದವಿ ಕಾಲೇಜು ಪ್ರಾರಂಭಗೊಂಡಿದ್ದು, ಮೂರು ದಿನದಲ್ಲಿ ಕಾಲೇಜು ಸಿಬ್ಬಂದಿ, ವಿದ್ಯಾರ್ಥಿಗಳು ಸೇರಿ 1,500 ಜನರ ಆರ್​​​ಟಿಪಿಸಿಆರ್ ಟೆಸ್ಟ್ ಮಾಡಲಾಗಿದೆ. ಆರ್ ಟಿಪಿಸಿಆರ್ ಟೆಸ್ಟ್ ವರದಿ ಇದ್ದರೆ ಮಾತ್ರ ಕಾಲೇಜಿಗೆ ಪ್ರವೇಶ ನೀಡಲಾಗುವುದು ಎಂಬ ಕಾರಣಕ್ಕೆ ಎಲ್ಲ ವಿದ್ಯಾರ್ಥಿಗಳು ಈ ಪರೀಕ್ಷೆಗೆ ಒಳಗಾಗಿದ್ದು, ಈ ಪೈಕಿ 10 ವಿದ್ಯಾರ್ಥಿಗಳಿಗೆ ಕೊರೊನಾ ಪಾಸಿಟಿವ್​ ಇರುವುದು ದೃಢಪಟ್ಟಿದೆ.

ಈ ಎಲ್ಲ ವಿದ್ಯಾರ್ಥಿಗಳಿಗೆ ಕೊರೊನಾ ಪಾಸಿಟಿವ್ ಇರುವುದಾಗಿ ವರಿದಿ ಬಂದಿದೆ. ಆದರೆ, ಯಾವುದೇ ರೋಗ ಲಕ್ಷಣಗಳು ಕಂಡು ಬಂದಿಲ್ಲ. ಲಕ್ಷಣಗಳಿಲ್ಲದ ಕಾರಣ ವಿದ್ಯಾರ್ಥಿಗಳಿಗೆ ಪ್ರಾಥಮಿಕ ಚಿಕಿತ್ಸೆ ನೀಡಿ ಹೋಮ್ ಐಸೊಲೇಷನ್​​ನಲ್ಲಿ ಇರುವಂತೆ ಆರೋಗ್ಯ ಇಲಾಖೆ ಸೂಚಿಸಿದೆ.

Last Updated : Nov 20, 2020, 10:53 AM IST

ABOUT THE AUTHOR

...view details