ಬಾಗಲಕೋಟೆ:ಜಿಲ್ಲೆಯಲ್ಲಿ 150 ಜನ ಕೋವಿಡ್ನಿಂದ ಗುಣಮುಖರಾಗಿ ನಿಗದಿತ ಆಸ್ಪತ್ರೆ ಮತ್ತು ಸಿಸಿಸಿ ಕೇಂದ್ರಗಳಿಂದ ಬಿಡುಗಡೆಯಾಗಿದ್ದು ಹೊಸದಾಗಿ 121 ಕೊರೊನಾ ಪ್ರಕರಣಗಳು ಹಾಗೂ ಮೂರು ಮೃತ ಪ್ರಕರಣ ಬುಧವಾರ ದೃಢಪಟ್ಟಿವೆ ಎಂದು ಜಿಲ್ಲಾಧಿಕಾರಿ ಕ್ಯಾಪ್ಟನ್ ಡಾ.ಕೆ.ರಾಜೇಂದ್ರ ತಿಳಿಸಿದ್ದಾರೆ.
ಬಾಗಲಕೋಟೆ ಜಿಲ್ಲೆಯಲ್ಲಿ ಇಂದು 121 ಹೊಸ ಪ್ರಕರಣಗಳು ದೃಢ; ಮೂರು ಸಾವು - Bagalakote new cases
ಬಾಗಲಕೋಟೆ ಜಿಲ್ಲೆಯ ಇಂದಿನ ಕೊರೊನಾ ಅಂಕಿ-ಅಂಶ ಹೀಗಿದೆ...
ಜಿಲ್ಲೆಯಲ್ಲಿ ಇಲ್ಲಿಯವರೆಗೆ ಒಟ್ಟು 11,190 ಕೋವಿಡ್ ಪ್ರಕರಣಗಳು ದೃಢಪಟ್ಟಿದ್ದು, ಈ ಪೈಕಿ ಇಲ್ಲಿಯವರೆಗೆ ಒಟ್ಟು 10,167 ಜನ ಕೋವಿಡ್ನಿಂದ ಗುಣಮುಖರಾಗಿದ್ದಾರೆ. ಹೊಸದಾಗಿ ಬಾಗಲಕೋಟೆ ತಾಲೂಕಿನಲ್ಲಿ 21, ಬಾದಾಮಿ 18, ಹುನಗುಂದ 24, ಬೀಳಗಿ 5, ಮುಧೋಳ 29, ಜಮಖಂಡಿ 24 ಜನರಲ್ಲಿ ಸೋಂಕು ದೃಢಪಟ್ಟಿದ್ದು, ಅವರನ್ನು ನಿಗದಿತ ಆಸ್ಪತ್ರೆ ಮತ್ತು ಸಿಸಿಸಿ ಕೇಂದ್ರಗಳಲ್ಲಿ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಜಿಲ್ಲಾ ಕೋವಿಡ್ ಲ್ಯಾಬ್ನಲ್ಲಿ ಪರೀಕ್ಷಿಸಲಾಗುತ್ತಿದ್ದ 1184 ಸ್ಯಾಂಪಲ್ಗಳ ವರದಿಯನ್ನು ನಿರೀಕ್ಷಿಸಲಾಗುತ್ತಿದೆ. ಜಿಲ್ಲೆಯಿಂದ ಇಲ್ಲಿಯವರೆಗೆ ಒಟ್ಟು 119,304 ಸ್ಯಾಂಪಲ್ಗಳನ್ನು ಪರೀಕ್ಷಿಸಲಾಗಿದ್ದು, ಈ ಪೈಕಿ 106,419 ನೆಗೆಟಿವ್ ಪ್ರಕರಣ, 11,190 ಪಾಸಿಟಿವ್ ಪ್ರಕರಣ ಹಾಗೂ 113 ಮೃತ ಪ್ರಕರಣ ವರದಿಯಾಗಿವೆ. ಇನ್ನು 910 ಸಕ್ರಿಯ ಪ್ರಕರಣಗಳಿದ್ದು ಇಲ್ಲಿವರೆಗೆ ಒಟ್ಟು 413 ಸ್ಯಾಂಪಲ್ಗಳು ರಿಜೆಕ್ಟ್ ಆಗಿವೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.