ಬಾಗಲಕೋಟೆ :ಜಿಲ್ಲೆಯಲ್ಲಿಂದು 124 ಕೊರೊನಾ ಪ್ರಕರಣಗಳು ದೃಢಪಟ್ಟಿದ್ದು, ವಿವಿಧ ಆಸ್ಪತ್ರೆಗಳಿಂದ ಮತ್ತು ಸಿಸಿಸಿ ಕೇಂದ್ರಗಳಿಂದ 145 ಜನ ಬಿಡುಗಡೆಯಾಗಿದ್ದಾರೆ ಎಂದು ಜಿಲ್ಲಾಧಿಕಾರಿ ಕ್ಯಾಪ್ಟನ್ ಡಾ.ಕೆ.ರಾಜೇಂದ್ರ ತಿಳಿಸಿದ್ದಾರೆ.
ಜಿಲ್ಲೆಯಲ್ಲಿ ಇಲ್ಲಿಯವರೆಗೆ ಒಟ್ಟು 11,488 ಕೊರೊನಾ ಪ್ರಕರಣಗಳು ದೃಢಪಟ್ಟಿದ್ದು, ಈ ಪೈಕಿ ಒಟ್ಟು 10,754 ಜನ ಗುಣಮುಖರಾಗಿದ್ದಾರೆ. ಹೊಸದಾಗಿ ದೃಢಪಟ್ಟವರಲ್ಲಿ ಬಾಗಲಕೋಟೆ ತಾಲೂಕಿನಲ್ಲಿ 29, ಬಾದಾಮಿ 21, ಹುನಗುಂದ 21, ಬೀಳಗಿ 4, ಮುಧೋಳ 25, ಜಮಖಂಡಿ 24 ಜನರಲ್ಲಿ ಸೋಂಕು ದೃಢಪಟ್ಟಿದೆ.