ಕರ್ನಾಟಕ

karnataka

ETV Bharat / state

ಬಾಗಲಕೋಟೆ: 139 ಜನರಿಗೆ ಕೊರೊನಾ, 140 ಮಂದಿ ಗುಣಮುಖ - 139 New Corona cases found in Bagalkote

ಬಾಗಲಕೋಟೆ ಜಿಲ್ಲೆಯಲ್ಲಿ ಇಂದು 139 ಜನರಲ್ಲಿ ಸೋಂಕು ಕಾಣಿಸಿಕೊಂಡಿದೆ. ಇದರ ಜೊತೆಗೆ 140 ಮಂದಿ ಕೊರೊನಾದಿಂದ ಮುಕ್ತಿ ಪಡೆದಿದ್ದಾರೆ.

Bagalkote
Bagalkote

By

Published : Aug 23, 2020, 9:13 PM IST

ಬಾಗಲಕೋಟೆ:ಜಿಲ್ಲೆಯಲ್ಲಿ ಇಂದು ಹೊಸದಾಗಿ 139 ಜನರಿಗೆ ಕೊರೊನಾ ಸೋಂಕು ತಗುಲಿದೆ.

ಇಂದು ಬಾಗಲಕೋಟೆ ತಾಲೂಕಿನಲ್ಲಿ 33, ಬಾದಾಮಿ 14, ಹುನಗುಂದ 29, ಬೀಳಗಿ 4, ಮುಧೋಳ 10, ಜಮಖಂಡಿ 44 ಹಾಗೂ ಬೇರೆ ಜಿಲ್ಲೆಯ 5 ಜನರಿದ್ದು, ಅವರನ್ನು ನಿಗದಿತ ಆಸ್ಪತ್ರೆ ಮತ್ತು ಸಿಸಿಸಿ ಕೇಂದ್ರಗಳಲ್ಲಿ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಈ ಮೂಲಕ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 5,199 ಕ್ಕೆ ಏರಿಕೆಯಾಗಿದೆ.

ಇಂದು ಜಿಲ್ಲೆಯಲ್ಲಿ 140 ಜನರು ಕೋವಿಡ್‍ನಿಂದ ಗುಣಮುಖರಾಗಿ ನಿಗದಿತ ಆಸ್ಪತ್ರೆ ಮತ್ತು ಸಿಸಿಸಿ ಕೇಂದ್ರಗಳಿಂದ ಬಿಡುಗಡೆ ಮಾಡಲಾಗಿದ್ದು, ಇಲ್ಲಿಯವರೆಗೆ ಒಟ್ಟು 4,291 ಜನ ಕೋವಿಡ್‍ನಿಂದ ಗುಣಮುಖರಾಗಿದ್ದಾರೆ.

ಜಿಲ್ಲಾ ಕೋವಿಡ್ ಲ್ಯಾಬ್‍ನಲ್ಲಿ ಮಾದರಿಗಳನ್ನು ಪರೀಕ್ಷಿಸಲಾಗುತ್ತಿದ್ದು, 1,426 ಸ್ಯಾಂಪಲ್‍ಗಳ ವರದಿಯನ್ನು ನಿರೀಕ್ಷಿಸಲಾಗುತ್ತಿದೆ. ಪ್ರತ್ಯೇಕವಾಗಿ 514 ಜನ ನಿಗಾದಲ್ಲಿದ್ದಾರೆ. ಜಿಲ್ಲೆಯಿಂದ ಇಲ್ಲಿಯವರೆಗೆ ಒಟ್ಟು 49,851 ಸ್ಯಾಂಪಲ್‍ಗಳನ್ನು ಪರೀಕ್ಷೆಗೆ ಕಳುಹಿಸಲಾಗಿದ್ದು, ಈ ಪೈಕಿ 42,921 ನೆಗೆಟಿವ್ ಪ್ರಕರಣ, 5,199 ಪಾಸಿಟಿವ್ ಪ್ರಕರಣ ಹಾಗೂ 66 ಮೃತ ಪ್ರಕರಣ ವರದಿಯಾಗಿರುತ್ತದೆ.

ಇನ್ನು 835 ಮಾತ್ರ ಸಕ್ರಿಯ ಪ್ರಕರಣಗಳಿವೆ. ಇಲ್ಲಿವರೆಗೆ ಒಟ್ಟು 210 ಸ್ಯಾಂಪಲ್‍ಗಳು ಮಾತ್ರ ರಿಜೆಕ್ಟ್ ಆಗಿರುತ್ತವೆ. ಕಂಟೈನ್‌ಮೆಂಟ್‌ ಝೋನ್ 585 ಇದ್ದು, ಇನ್‍ಸ್ಟಿಟ್ಯೂಶನ್ ಕ್ವಾರಂಟೈನ್‌ನಲ್ಲಿದ್ದ 8,429 ಜನರನ್ನು ಬಿಡುಗಡೆ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.

ABOUT THE AUTHOR

...view details