ಕರ್ನಾಟಕ

karnataka

ETV Bharat / state

ಬಾಗಲಕೋಟೆ ಜಿಲ್ಲೆಯಲ್ಲಿ 144 ಜನರಿಗೆ ಕೊರೊನಾ: 64 ಮಂದಿ ಗುಣಮುಖ

ಬಾಗಲಕೋಟೆ ಜಿಲ್ಲೆಯಲ್ಲಿಂದು ಕಂಡು ಬಂದಿರುವ ಕೊರೊನಾ ಪ್ರಕರಣಗಳ ವಿವಿರ ಇಂತಿದೆ.

Bagalkote
Bagalkote

By

Published : Sep 5, 2020, 8:15 PM IST

ಬಾಗಲಕೋಟೆ : ಜಿಲ್ಲೆಯಲ್ಲಿ 64 ಜನ ಕೋವಿಡ್‍ನಿಂದ ಗುಣಮುಖರಾಗಿ ನಿಗದಿತ ಆಸ್ಪತ್ರೆ ಮತ್ತು ಸಿಸಿಸಿ ಕೇಂದ್ರಗಳಿಂದ ಬಿಡುಗಡೆಯಾಗಿದ್ದು, ಹೊಸದಾಗಿ 144 ಕೊರೊನಾ ಪ್ರಕರಣಗಳು ದೃಢಪಟ್ಟಿವೆ.

ಇಂದಿನ ಕೊರೊನಾ ಪ್ರಕರಣಗಳು

ಇಂದು ಹೊಸದಾಗಿ ಬಾಗಲಕೋಟೆ ತಾಲೂಕಿನಲ್ಲಿ 46, ಬಾದಾಮಿ 11, ಹುನಗುಂದ 32, ಬೀಳಗಿ 16, ಮುಧೋಳ 16, ಜಮಖಂಡಿ 19 ಹಾಗೂ ಬೇರೆ ಜಿಲ್ಲೆಯ ಇಬ್ಬರಿಗೆ ಸೋಂಕು ದೃಢಪಟ್ಟಿದ್ದು, ಅವರನ್ನು ನಿಗದಿತ ಆಸ್ಪತ್ರೆ ಮತ್ತು ಸಿಸಿಸಿ ಕೇಂದ್ರಗಳಲ್ಲಿ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಈ ಮೂಲಕ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 6,881 ಕ್ಕೆ ಏರಿಕೆಯಾಗಿದೆ.

ಮೃತರ ಸಂಖ್ಯೆ:

ಜಿಲ್ಲೆಯಲ್ಲಿಂದು ಕೊರೊನಾಗೆ ಇಬ್ಬರು ವ್ಯಕ್ತಿಗಳು ಮೃತಪಟ್ಟಿದ್ದು, ಈ ಮೂಲಕ ಸಾವನ್ನಪ್ಪಿದವರ ಸಂಖ್ಯೆ 80ಕ್ಕೆ ಏರಿಕೆಯಾಗಿದೆ.

ಗುಣಮುಖ:

ಕೊರೊನಾದಿಂದ ಇಂದು 64 ಜನರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇದುವಗೆರೆ ಒಟ್ಟು 5,794 ಮಂದಿ ಗುಣಮುಖರಾದಂತಾಗಿದೆ. ಇನ್ನು 1,007 ಮಾತ್ರ ಸಕ್ರಿಯ ಪ್ರಕರಣಗಳಿವೆ.

ಕೋವಿಡ್ ಪರೀಕ್ಷೆ:

ಜಿಲ್ಲೆಯಿಂದ ಇಲ್ಲಿಯವರೆಗೆ ಒಟ್ಟು 68,178 ಸ್ಯಾಂಪಲ್‍ಗಳನ್ನು ಪರೀಕ್ಷೆಗೆ ಕಳುಹಿಸಲಾಗಿದ್ದು, ಈ ಪೈಕಿ 60,348 ನೆಗೆಟಿವ್ ಪ್ರಕರಣ, 6,881 ಪಾಸಿಟಿವ್ ಪ್ರಕರಣಗಳು ವರದಿಯಾಗಿರುತ್ತದೆ.

ಇಲ್ಲಿವರೆಗೆ ಒಟ್ಟು 214 ಸ್ಯಾಂಪಲ್‍ಗಳು ಮಾತ್ರ ರಿಜೆಕ್ಟ್ ಆಗಿರುತ್ತವೆ. ಕಂಟೈನ್ಮೆಂಟ್ ಝೋನ್ 652 ಇದ್ದು, ಇನ್‍ಸ್ಟಿಟ್ಯೂಷನ್ ಕ್ವಾರಂಟೈಮ್​ನಲ್ಲಿದ್ದ 8,803 ಜನರನ್ನು ಬಿಡುಗಡೆ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.

ABOUT THE AUTHOR

...view details